ಕೆ.ವಿ. ಸುಬ್ಬಣ್ಣ ಅವರ ಆಯ್ದ ಲೇಖನಗಳು

Author : ಕೆ.ವಿ. ಸುಬ್ಬಣ್ಣ

Pages 168

₹ 120.00




Year of Publication: 2017
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕನ್ನಡ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆ.ವಿ. ಸುಬ್ಬಣ್ಣ ಅವರು ಚಿರಪರಿಚಿತ ಹೆಸರು. ಹೆಗ್ಗೋಡಿನಂತಹ ಕುಗ್ರಾಮದಲ್ಲಿ ಇದ್ದು ಸಾಂಸ್ಕೃತಿಕ ವಾತಾವರಣ ರೂಪಿಸಿದ ಸುಬ್ಬಣ್ಣ ಕನ್ನಡದ ಪ್ರಮುಖ ಲೇಖಕರಲ್ಲಿ ಒಬ್ಬರು. ಸಾಹಿತ್ಯ-ವಿಮರ್ಶೆ- ಪರಿಸರ-ಸಿನಿಮಾ-ರಂಗಭೂಮಿ ಹೀಗೆ ಹತ್ತು ಹಲವು ಕ್ಷೇತ್ರಗಳ ಬಗ್ಗೆ ಸುಬ್ಬಣ್ಣ ಲೇಖನಗಳನ್ನು ಬರೆದಿದ್ದಾರೆ. ಸುಬ್ಬಣ್ಣ ಅವರ ಆಯ್ದ ಲೇಖನಗಳನ್ನು ಒಳಗೊಂಡ ಸಂಕಲನವಿದು.

About the Author

ಕೆ.ವಿ. ಸುಬ್ಬಣ್ಣ
(20 February 1931)

ಕೆ.ವಿ. ಸುಬ್ಬಣ್ಣ ಕನ್ನಡದ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ. ಎ. ಪದವಿ ಪಡೆದ ನಂತರ ಅವರು ಕೃಷಿಕಾಯಕ ಆರಂಭಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಚ್ಚರಿಪಡುವ ಹಾಗಿದೆ. ಕವಿ, ನಾಟಕಕಾರ, ಅನುವಾದಕರಾಗಿದ್ದ ಅವರು 'ಅಕ್ಷರ ಪ್ರಕಾಶನ' 'ನೀನಾಸಂ ರಂಗ ಚಟುವಟಿಕೆ'ಗಳನ್ನು ನಿರ್ವಹಿಸಿದವರು. ಭಾರತೀಯ ಸಂಸ್ಕೃತಿಗೆ ವಿಶಿಷ್ಟ ಮಾದರಿ ಎನ್ನುವ ಹಾಗೆ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಪುಟ್ಟಹಳ್ಳಿಯಲ್ಲಿ ನಡೆಸಿದ್ದು ಒಂದು ದಾಖಲೆ. ಮ್ಯಾಗ್ಸೆಸ್ಸೆ ಪ್ರಶಸ್ತಿಯಿಂದ ಹೆಗ್ಗೋಡು ಅಂತರರಾಷ್ಟ್ರೀಯ ನಕ್ಷೆಯಲ್ಲಿ ದಾಖಲಾಯಿತು. ಕೆ.ವಿ. ಸುಬ್ಬಣ್ಣ ಒಬ್ಬ ವ್ಯಕ್ತಿಯಲ್ಲ, ಮಹಾನ್ ಶಕ್ತಿ. ಅವರ ಬೆಳವಣಿಗೆ ವೈಯಕ್ತಿಕವಾದದ್ದಲ್ಲ, ಸಾಂಘಿಕವಾದದ್ದು. 'ಅಕ್ಷರ ಪ್ರಕಾಶನದ ಮೂಲಕ , 'ನೀನಾಸಂ' ಮೂಲಕ ಅನೇಕ ಪ್ರತಿಭೆಗಳನ್ನು ಅವರು ...

READ MORE

Related Books