1990 ರಿಂದ 2010 ರವರೆಗಿನ ಎರಡು ದಶಕಗಳಲ್ಲಿ ಕನ್ನಡದ ಕಥಾ ಪರಂಪರೆಯಲ್ಲಿ ಬಂಡಾಯ, ದಲಿತ ಸಾಹಿತ್ಯದ ಬಿಸುಪು ಆರಿ, ನವೋತ್ತರದಿಂದ ಮುಕ್ತಕಾಲದವರೆಗೆ ಬೆಳೆದುಬಂದ ಇಲ್ಲವೇ ಬದಲಾವಣೆಗೊಂಡ ಬಗೆಯನ್ನು, ಮೂರನೇ ತಲೆಮಾರಿನ ಬಹು ಮುಖ್ಯ ಕಥೆಗಾರರ ಆಯ್ದ ಕಥೆಗಳ ಮೂಲಕವೇ ಅರ್ಥ ಮಾಡಿಸುವ ಒಂದು ವಿಶಿಷ್ಟ ಪ್ರಯತ್ನ ಇಲ್ಲಿದೆ. ‘ಕಾಲ ಕರಗುವ ಮುನ್ನ’ ಸಂಕಲನದ ಕಥೆಗಳು ಒಂದಕ್ಕಿಂತ ಒಂದು ಭಿನ್ನವಾಗಿವೆ, ಅನನ್ಯವಾಗಿವೆ.
ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...
READ MORE