ಲೇಖಕಿ ಸುನಂದಾ ಬೆಳಗಾಂವಕರ್ ಅವರ ಕಾದಂಬರಿ-ಕಾಯಕ ಕೈಲಾಸ. ಝವಾದಿ ಹಾಗೂ ನಾಸು ಶೀರ್ಷಿಕೆಯ ಕಾದಂಬರಿಗಳನ್ನು ರಚಿಸಿದ ಲೇಖಕಿಯು ತಮ್ಮ ಪರಿಣಾಮಕಾರಿ ಬರಹದ ಮೂಲಕ ಸಾಹಿತ್ಯಕ ವಲಯದಲ್ಲಿ ಗಟ್ಟಿಯಾಗಿ ಹೆಜ್ಜೆ ಇಟ್ಟವರು. ಕಾಯಕ ಕೈಲಾಸ-ಎಂಬುದು ಇವರ ಹೊಸ ಕಾದಂಬರಿ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ಇಪ್ಪತ್ತನೆ ಶತಮಾನದ ಪೂರ್ವಾರ್ಧದ ಸಮಕಾಲೀನ ಲೇಖಕಿಯರಲ್ಲಿ ಒಂದು ಗಣನೀಯ ಹೆಸರೆಂದರೆ ಸುನಂದಾ ಬೆಳಗಾಂವಕರ. ಧಾರವಾಡದ ಮಹಿಷಿ ಕುಟುಂಬದವರು. ವಿವಾಹದ ನಂತರ ಆಫ್ರಿಕಾ ಖಂಡದ ಝಾಂಬಿಯ ದೇಶದಲ್ಲಿ ತಮ್ಮ ಪತಿಯೊಡನೆ ಮೂವತ್ತು ವರ್ಷ ಕಳೆದು, ಬಳಿಕ ಭಾರತಕ್ಕೆ ಹಿಂತಿರುಗಿದರು. ಸುನಂದಾ ಬೆಳಗಾವಕರರವರು ಬರೆದ ‘ಕಜ್ಜಾಯ(ಪ್ರಬಂಧ)’ ಸುಧಾ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ ಅಪಾರ ಜನಪ್ರಿಯತೆಯನ್ನು ತಂದುಕೊಟ್ಟಿತು. ಇದಲ್ಲದೆ ಅವರು ‘ಶಾಲ್ಮಲಿ’ ಎನ್ನುವ ಕಾವ್ಯಸಂಕಲನ, ‘ನಾಸು’, ‘ಝವೇರಿ’ ಎನ್ನುವ ಕಾದಂಬರಿಗಳನ್ನು ಬರೆದಿದ್ದಾರೆ. ಸುನಂದಾ ಬೆಳಗಾಂವಕರ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರ ‘ನಾಸು’ ಕಾದಂಬರಿಗೆ 1990 ರಲ್ಲಿಕರ್ನಾಟಕ ವಿದ್ಯಾವರ್ಧಕ ಸಂಘದ ರತ್ನಮ್ಮ ಹೆಗ್ಗಡೆ ಪ್ರಥಮ ಬಹುಮಾನ ಲಭಿಸಿದೆ. 2017ರಲ್ಲಿ ನಿಧನ ಹೊಂದಿದರು. ...
READ MORE