‘ಕದಡಿದ ಕಣಿವೆ- ಕಾಶ್ಮೀರಿ ಪಂಡಿತರ ನೋವು- ನರಳಾಟ’ ರಾಹುಲ್ ಪಂಡಿತ ಅವರ ಇಂಗ್ಲಿಷ್ ಕೃತಿಯನ್ನು ಲೇಖಕ ಜಯಪ್ರಕಾಶ ನಾರಾಯಣ ಬಿ.ಎಸ್. ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಇದು ಕಾಶ್ಮೀರಿ ಪಂಡಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೃತಿ. ಪತ್ರಕರ್ತರೂ, ಲೇಖಕರೂ ಆದ ಬಿ.ಎಸ್. ಜಯಪ್ರಕಾಶ್ ನಾರಾಯಣ ಅವರು ಇಂಗ್ಲಿಷ್ ಬರಹಗಾರ ರಾಹುಲ್ ಪಂಡಿತ್ ಅವರ `ಅವರ್ ಮೂನ್ ಹ್ಯಾಸ್ ಬ್ಲಡ್ ಕ್ಲಾಟ್ಸ್ ' ಎಂಬ ಮಹತ್ವದ ಕೃತಿಯನ್ನು `ಕದಡಿದ ಕಣಿವೆ' ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.
ಪತ್ರಕರ್ತ ಬಿ.ಎಸ್. ಜಯಪ್ರಕಾಶ್ ನಾರಾಯಣ ಅವರು ಉತ್ತಮ ಅನುವಾದಕ ಕೂಡ. ಪ್ರಜಾವಾಣಿ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಉಪಸಂಪಾದಕ/ ವರದಿಗಾರರಾಗಿ ಕಾರ್ಯ ನಿರ್ವಹಿಸಿರುವ ಅವರು ಸದ್ಯ ಅನುವಾದದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಟಿ.ಜೆ.ಎಸ್. ಜಾರ್ಜ್ ಅವರ ಎಂ.ಎಸ್., ಯು.ಆರ್. ಅನಂತಮೂರ್ತಿ ಅವರ ’ನನ್ನ ಸಾಹಿತ್ಯದ ಐದು ದಶಕಗಳು’, ’ನಾನು ಮಲಾಲ’ ಕೃತಿಗಳನ್ನು ಅನುವಾದಿಸಿದ್ದಾರೆ. ಛಾಯಾಗ್ರಾಹಕ ಕೆ.ಜಿ. ಸೋಮಶೇಖರ ಅವರ ಆತ್ಮಕತೆ ’ನನ್ನ ಬದುಕು ನನ್ನ ಫೋಟೊಗ್ರಫಿ’ ಕೃತಿಯನ್ನು ನಿರೂಪಿಸಿದ್ದಾರೆ. ...
READ MORE