‘ಕದ್ದು-ಮುಚ್ಚಿ’ ಲೇಖಕಿ ಗೀತಾ ನಾಗಭೂಷಣ ಅವರ ಕಾದಂಬರಿ. ಕೆಳಸ್ತರದ ಸಮುದಾಯದ ಮೇಲಿನ ದೌರ್ಜನ್ಯ, ಮೇಲ್ವರ್ಗದ ಗೌಡ, ಕುಲಕರ್ಣಿ, ಸಾಹುಕಾರರಿಂದ ನಿರ್ಗತಿಕ ಹೆಂಗಸರ ಮೇಲೆ ನಡೆಯುತ್ತಿದ್ದ ಲೈಂಗಿಕ ಶೋಷಣೆ, ಮೂಢ ನಂಬಿಕೆಗಳು- ಇವುಗಳ ವಿರುದ್ಧ ಆಡುನುಡಿಗಳ ಅಸಲೀ ಜವಾರಿ ಭಾಷೆಯಲ್ಲಿ ದಿಟ್ಟತನದಿಂದ ಬರೆವ ಗೀತಾ ನಾಗಭೂಷಣ ಅವರು ಈ ಕೃತಿಯಲ್ಲಿಯೂ ಅಂತಹದ್ದೇ ಸಾಮಾಜಿಕ ಸಮಸ್ಯೆಗಳ ವಿರುದ್ಧ ಬರೆದಿದ್ದಾರೆ.
ಕನ್ನಡದ ಲೇಖಕಿಯರಲ್ಲಿ ಒಬ್ಬರಾದ ಗೀತಾ ನಾಗಭೂಷಣ ಅವರು ತಮ್ಮ ಕಾದಂಬರಿ-ಕತೆಗಳ ಮೂಲಕ ಜನಪ್ರಿಯರಾದವರು. ಗುಲ್ಬರ್ಗದ ಬಡ ಕುಟುಂಬದಲ್ಲಿ 1942ರ ಮಾರ್ಚ್ 25ರಂದು ಜನಿಸಿದರು. ತಂದೆ ಶಾಂತಪ್ಪ-ತಾಯಿ ಶರಣಮ್ಮ. ಮೆಟ್ರಿಕ್ ಮುಗಿಸಿದ ಮೇಲೆ ಕೆಲವುಕಾಲ ಕಲೆಕ್ಟರ್ ಕಛೇರಿಯಲ್ಲಿ ಉದ್ಯೋಗ ಮಾಡಿ ಬೆಳಗಿನ ಶಾಲೆಯಲ್ಲಿ ಓದಿ ಪದವಿ ಪಡೆದು, ಸಂಜೆ ಕಾಲೇಜಿನಲ್ಲಿ ಓದಿ ಬಿಎಡ್ ಮತ್ತು ಎಂ.ಎ. ಪದವಿ ಗಳಿಸಿದರು. ಓದುವಾಗಲೇ ಉದ್ಯೋಗ ಮಾಡುತ್ತಿದ್ದ ಇವರು ಎಂ.ಎ. ಪದವಿ ಗಳಿಸಿದ ನಂತರ ಶ್ರೀ ನಗರೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ, ಪ್ರಾಚಾರ್ಯೆಯಾಗಿ 30ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದರು. ...
READ MORE