‘ಕೈಗನ್ನಡಿಯಲ್ಲಿ ಕನ್ನಡಿತಿ’ ಕೃತಿಯು ಜ್ಯೋತ್ಸ್ನಾ ಕಾಮತ್ ಅವರ ಲೇಖನಗಳ ಸಂಕಲನವಾಗಿದೆ. ಧಾರವಾಡದ ಕರ್ನಾಟಕ ಇತಿಹಾಸ ಸಂಶೋಧನ ಮಂಡಲವು ದಕ್ಷಿಣ ಭಾರತದ ಪ್ರಾಚೀನ ಸಂಶೋಧನ ಕೇಂದ್ರಗಳಲ್ಲಿ ಪ್ರಸಿದ್ಧಿ ಪಡೆದಿದ್ದು, ಈ ಸಂಸ್ಥೆಯ ಕಿರು ಪರಿಚಯವನ್ನು ಮಾಡಿಕೊಳ್ಳಲು ಬಯಸುವವರಿಗೆ ಇದರ ಸ್ಥಾಪನೆಯ ಪೂರ್ವದಲ್ಲಿ ಅಂದರೆ 1913ರ ಮೊದಲು ಮತ್ತು ಅನಂತರದ ಕೆಲವು ಘಟನೆಗಳನ್ನು ಅರಿತುಕೊಳ್ಳಬೇಕಾಗುತ್ತದೆ. ಈ ಉದ್ದೇಶದಿಂದ ಮತ್ತು ಈ ಘಟನೆಗಳು ಸ್ವಾರಸ್ಯ ಪೂರ್ಣವಾಗಿರುವುದರಿಂದ ಅವುಗಳನ್ನು ಇಲ್ಲಿ ಉಲ್ಲೇಖಿಸಿದ್ದಾಗಿ ಲೇಖಕಿ ಹೇಳುತ್ತಾರೆ.
ಸಂಶೋಧಕಿ, ಸ್ತ್ರೀ ಚಿಂತನೆಯ ಕನ್ನಡದ ಬರಹಗಾರ್ತಿ ಜ್ಯೋತ್ಸ್ನಾ ಕಾಮತ್ ಅವರು 1937 ಜನವರಿ 24 ರಂದು ಮಹಾರಾಷ್ಟ್ರದ ಸಾತಾರ ಜಿಲ್ಲೆಯ ವಾಯಿಯಲ್ಲಿ ಜನಿಸಿದರು. ‘ಸಂಸಾರದಲ್ಲಿ ಸ್ವಾರಸ್ಯ, ಹೀಗಿದ್ದೇವೆ ನಾವು, ನಗೆಕೇದಿಗೆ’ ಅವರ ಪ್ರಬಂಧ ಸಂಕಲನಗಳು. ‘ಕರ್ನಾಟಕದಲ್ಲಿ ಶಿಕ್ಷಣ ಪರಂಪರೆ, ಕರುನಾಡಿನ ಜನಜೀವನ, ಕೈಗನ್ನಡಿಯಲ್ಲಿ ಕನ್ನಡತಿ’ ಅವರ ಸಂಶೋಧನಾ ಕೃತಿಗಳು. ‘ಮಹಿಳೆ ಒಂದು ಅಧ್ಯಯನ, ನೆನಪಿನಲ್ಲಿ ನಿಂತವರು, ಮಹಿಳೆ ಅಂದು-ಇಂದು’ ಅವರ ಮಹಿಳಾ ಅಧ್ಯಯನ ಕೃತಿಗಳು. ಇದಲ್ಲದೆ ಶಾಂತಲೆ-ವಿಷ್ಣುವರ್ಧನ, ಕಮಲಾದೇವಿ ಚಟ್ಟೋಪಾಧ್ಯಾಯರ ಜೀವನ ಕೃತಿಗಳನ್ನು ರಚಿಸಿದ್ದು ಅವರ ಈ ಸಾಹಿತ್ಯ ಸೇವೆಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕೆ.ಶಾಮರಾವ್ ದತ್ತಿನಿಧಿ ಪುರಸ್ಕಾರ, ...
READ MORE