‘ಕಲಾ ದಿಗ್ಗಜರು’ ದೃಶ್ಯಕಲೆ ಮತ್ತು ಕಲಾವಿದರ ಕುರಿತು ಮಾಹಿತಿ ನೀಡುವ ಲೇಖನಗಳ ಸಂಕಲನ. ಮರಿಶಾಮಾಚಾರ್ ಅವರು ಭಾರತೀಯ ಕಲೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ. ವಾಸ್ತವವಾಗಿ ಇದೊಂದು ಚಾರಿತ್ರಿಕ ಪುಸ್ತಕ. ವಿವಿಧ ಕಲಾಪಂಥಗಳ ಬಗ್ಗೆ ಬರೆಯುವಾಗ ಯಾವ ಯಾವ ದೇಶದಲ್ಲಿ ಯಾವ ಯಾವ ಕಲಾ ಮಾರ್ಗಗಳು ಮಾದರಿ ಸಾಧನೆ ಮಾಡಿವೆ ಎಂಬುದನ್ನು ಕಲಾಕೃತಿಗಳ ಉಲ್ಲೇಖದಿಂದ ಚಿತ್ರಗಳ ಮರುಮುದ್ರಣದಿಂದ, ಕಲಾನುಕ್ರಮ ಇತಿಹಾಸದಿಂದ, ಪಂಥ ಹಾಗೂ ಪದ್ಧತಿಗಳ ನಿಖರ ವ್ಯಾಖ್ಯಾನದಿಂದ ಈ ಕೃತಿಯನ್ನು ರಚಿಸಿದ್ದಾರೆ. ಇದು ಕಲೆಗೆ ಸಂಬಂಧಿಸಿದಂತೆ ಕನ್ನಡದ ಆಕರ ಗ್ರಂಥ.
ಕರ್ನಾಟಕದ ಕಲಾವಲಯದ ಹಿರಿಯರು ’ಮರಿ’ ಎಂದು ಕರೆಯುತ್ತಿದ್ದ ಎನ್. ಮರಿಶಾಮಾಚಾರ್ ಅವರು ರಾಜ್ಯದ ಅಪರೂಪದ ಕಲಾಪರಿಚಾರಕ-ಲೇಖಕ. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ಮರಿಶಾಮಾಚಾರ್ ಅವರು ಕಲಾಸಾಹಿತಿ. ’ನಡೆದಾಡುವ ಕಲಾಕೋಶ’ ಎಂದು ಕಲಾವಲಯದಲ್ಲಿ ಅವರನ್ನು ಗುರುತಿಸಲಾಗುತ್ತಿತ್ತು. ವಿಜಯಪುರದಲ್ಲಿ 1951ರ ಮೇ 15ರಂದು ಜನಿಸಿದ ಮರಿಶಾಮಾಚಾರ್ ಅವರು ಜಯನಗರದ ಆರ್.ವಿ. ಹೈಸ್ಕೂಲಿನಲ್ಲಿ ಓದುತ್ತಿರುವಾಗ ಡ್ರಾಯಿಂಗ್ ಮಾಡಲು ಆರಂಭಿಸಿದ್ದರು. ಅವರ ಅಣ್ಣ ಕೆನ್ ಶಾಲೆಯ ವಿದ್ಯಾರ್ಥಿಯಾಗಿದ್ದ. ಕಲೆಯ ಅಭಿರುಚಿ ಬಂದದ್ದು ಅವರ ಅಣ್ಣನಿಂದಲೇ. ಅಣ್ಣನ ಮೂಲಕ ಪರಿಚಯವಾದ ಕಲಾಗುರು ಆರ್.ಎಂ. ಹಡಪದ ಅವರ ಶಿಷ್ಯರಾಗಿದ್ದ ’ಮರಿ’ ಅವರು ಅವರ ಬಳಿ ಐದು ವರ್ಷ ...
READ MORE