ಲೇಖಕ ಚಂದ್ರಶೇಖರ ವಸ್ತ್ರದ ಅವರ ’ ಕುಲಕ್ಕೆ ತಿಲಕ ಮಾದರ ಚೆನ್ನಯ್ಯ’ ಕೃತಿಯು ಮಾದಾರ ಚೆನ್ನಯ್ಯನ ಜೀವನಕಥನವಾಗಿದೆ. ಕೃತಿಗೆ ಬೆನ್ನುಡಿ ಬರೆದಿರುವ ಡಾ. ಸಿದ್ಧಲಿಂಗಯ್ಯ ಅವರು, ಪ್ರಸ್ತುತ ಕೃತಿಯ ಮೂಲಕ ಮಾದಾರ ಚೆನ್ನಯ್ಯನವರ ಬದುಕಿನ ಬಗ್ಗೆ ಲೇಖಕರು ಹೊಸ ಬೆಳಕು ಚೆಲ್ಲಿದ್ದಾರೆ. ಚೆನ್ನಯ್ಯನವರ ಚಾರಿತ್ರಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಇಲ್ಲಿ ಗುರುತಿಸಲಾಗಿದೆ. ಹಲವು ಆಕರಗಳನ್ನು ಆಧರಿಸಿ ಸಂರಚನೆಗೊಂಡ ಈ ಕೃತಿ ಲೇಖಕರ ಸೃಜನ ಪ್ರತಿಭೆಗೆ, ಸಂಶೋಧನಾ ಪ್ರಜ್ಞೆಗೆ ಸಾಕ್ಷಿಯಾಗಿದೆ. ಮಾನವೀಯ ಸನ್ನಿವೇಶ, ನಾಟಕೀಯತೆ, ಸಂವಾದ ಶೈಲಿ ಈ ಸೃಜನಶೀಲ ಕೃತಿಯಲ್ಲಿ ಮಡುಗಟ್ಟಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಚಂದ್ರಶೇಖರ ವಸ್ತ್ರದ ಅವರು ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನವರು. ವಿವಿಧ ವಿಭಾಗಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ವಲಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವ, ಡಾ. ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಂಸ್ಥಾಪಕ ಸದಸ್ಯ ಕಾರ್ಯದರ್ಶಿ, ಕರ್ನಾಟಕ ಚಲನಚಿತ್ರ ಮಂಡಳಿ-ಗದಗ ಜಿಲ್ಲಾ ’ಬೆಳ್ಳಿ ಸಾಕ್ಷಿ’ ತಂಡದ ಜಿಲ್ಲಾ ಸದಸ್ಯ, ಕರ್ನಾಟಕ ಗಮಕ ಕಲಾ ಪರಿಷತ್ತಿನಲ್ಲಿ ಜಿಲ್ಲಾ ಅಧ್ಯಕ್ಷರಾಗಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ಮಾನವತಾವಾದಿ ಬಸವಣ್ಣನವರು, ಕುಲಕ್ಕೆ ತಿಲಕ ಮಾದಾರ ಚನ್ನಯ್ಯ, ಬೆಳಗು, ಹರಿದಾವ ನೆನಪು, ಮಭನದ ಮಾತುಗಳು, ಪ್ರೀತಿ ...
READ MORE