ಮಾಧವಿಕುಟ್ಟಿ-ಕಾವ್ಯನಾಮದೊಂದಿಗೆ ಸಾಹಿತ್ಯ ರಚಿಸುತ್ತಿರುವ ಮಲೆಯಾಳ ಭಾಷೆಯ ಲೇಖಕಿ ಕಮಲಾದಾಸ್ ಅವರ ಕಥೆಗಳನ್ನು ಲೇಖಕ ಕೆ.ಕೆ.ಗಂಗಾಧರನ್ ಅವರು ‘ಕಮಲಾದಾಸ: ಒಂದು ಪ್ರೀತಿಯ ಕತೆ ಮತ್ತು ಇತರ ಕತೆಗಳು’. ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಷಯ ವಸ್ತು ವೈವಿಧ್ಯತೆ, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.
ಕೇರಳದ ಕಾಸರಗೋಡು ಜಿಲ್ಲೆಯ ಪಾತನಡ್ಕ ಎಂಬ ಹಳ್ಳಿಯಲ್ಲಿ ಜನಿಸಿದ ಗಂಗಾಧರನ್ ಅವರು ಬಾಲ್ಯವನ್ನು ಕೊಡಗಿನ ಸೋಮವಾರಪೇಟೆಯ ಸಮೀಪದ ಕಬ್ಬಿಣಸೇತುವೆಯಲ್ಲಿ ಕಳೆದರು. ಕಾಜೂರು, ಸೋಮವಾರಪೇಟೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಿಂದ ಬಿಎಸ್‌ಸಿ ಪದವಿ ಪಡೆದರು. ಹಾಸನದ ಕೊಥಾರಿ ಕಾಫಿ ಕ್ಯೂರಿಂಗ್ ವರ್ಕ್ಸ್‌ನಲ್ಲಿ ವೃತ್ತಿ (1970) ಆರಂಭಿಸಿದ ಅವರು ನಂತರ ಅಂಚೆ ಇಲಾಖೆಯ ರೈಲ್ವೆ ಮೇಲ್ ಸರ್ವಿಸ್ ವಿಭಾಗದಲ್ಲಿ (1974) ಉದ್ಯೋಗ ಪಡೆದರು. ಅರಸೀಕೆರೆ, ತುಮಕೂರು, ಮೈಸೂರು, ಮಡಿಕೇರಿ ಹಾಗೂ ಬೆಂಗಳೂರುಗಳಲ್ಲಿ ಕೆಲಸ ಮಾಡಿದ ಅವರು ನಿವೃತ್ತ (2009)ರಾದರು. ಸದ್ಯ ಬೆಂಗಳೂರಿನ ವಿಶ್ವನೀಡಂನಲ್ಲಿ ನೆಲೆಸಿದ್ದಾರೆ. ...
READ MORE