ಕಂನಾಡಿಗಾ ನಾರಾಯಣರು (ಕಂನಾ) ಕೃತಿಯ ಲೇಖಕ ಟಿ.ಎಸ್. ರಾಜೇಂದ್ರ ಪ್ರಸಾದ್. ಕೃತಿಯಲ್ಲಿಯ ವಸ್ತು ವೈವಿಧ್ಯಗಳು ಓದುಗರನ್ನು ಅಚ್ಚರಿಗೆ ದೂಡುತ್ತದೆ. ಅವರ ದಣಿವರಿಯದ ಸಾಹಿತಿಯ ಸಮರ ಸಾಹಿತ್ಯದ ತೌಲನಿಕ ಅಧ್ಯಯನದ ಈ ಕೃತಿ ವಿಶೇಷವಾಗಿದ್ದು ಅವರ ಹಲವಾರು ಕೃತಿಗಳನ್ನು ಲೇಖಕರು ತಮ್ಮ ರೇಖೆಗೆ ನಿಲುಕಿಸಿಕೊಂಡು ವಸ್ತುನಿಷ್ಠವಾಗಿ ವಿಮರ್ಶಿಸಿದ ಲೇಖನಗಳ ಸಂಗ್ರಹ ‘ಕಂನಾ ಕಥನ’.
ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...
READ MORE