ದಾಸ ಸಾಹಿತ್ಯದ ಅಶ್ವಿನಿ ದೇವತೆ ಎಂಬ ಬಿರುದಿಗೆ ಪಾತ್ರರಾದ ಕನಕದಾಸರ ಜನನ, ಬಾಲ್ಯ, ಜೀವನ, ನಾಡ ಗೌಡಿಕೆ ಕೈ ತಪ್ಪಿತು, ತಿಮ್ಮಪ್ಪ ಹೇಗೆ ಕನಕನಾದುದು, ಕನಕನಾಯಕ ಕನಕದಾಸನಾದುದು ಹಾಗೂ ಅವರ ತತ್ವ ಚಿಂತನೆಯನ್ನು ಕಾದಂಬರಿಯ ಮೂಲಕ ಓದುಗರಿಗೆ ನೀಡಿದ್ದಾರೆ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರು ಕನಕದಾಸರ ಜೀವನ ದರ್ಶನ ಮಾಡಿಸಿದ್ದಾರೆ.
ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...
READ MORE