ಬೇರೆ ಬೇರೆ ಸಂದರ್ಭದಲ್ಲಿ ಕೇಳಿದ ಕಥೆಗಳಿಗೆ ಅಕ್ಷರ ರೂಪವನ್ನು ಈ ಕೃತಿಯಲ್ಲಿ ನೀಡಲಾಗಿದೆ. ಲೇಖಕರು ಮಕ್ಕಳಿಗೆ ಓದಲು ಅನುವಾಗುವಂತೆ ರಚಿಸಿರುವ ಈ ಕೃತಿಗಳು ಮಕ್ಕಳ ಮನ ಗೆಲ್ಲುವಂತಿವೆ. ಚಿಕ್ಕ ಪುಟ್ಟ ಸಂಗತಿಗಳನ್ನಿಟ್ಟುಕೊಂಡು ಕಟ್ಟಿರುವ ಈ ಕತೆಗಳಲ್ಲಿ ನೀತಿ ಪಾಠವಿದೆ. ಸರಳವಾಗಿ ಸುಂದರವಾಗಿ ಮೂಡಿ ಬಂದಿರುವ ಈ ಕೃತಿಯು ಮಕ್ಕಳಿಗೆ ಪುಸ್ತಕ ಓದುವ ಹವ್ಯಾಸವನ್ನು ಹುಟ್ಟಿಸುತ್ತದೆ.
ಚಿತ್ರದುರ್ಗ ಜಿಲ್ಲೆಯ ಆಂಧ್ರಗಡಿಯಂಚಿನ ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿಯವರಾದ ಡಾ. ಮೀರಾಸಾಬಿಹಳ್ಳಿ ಶಿವಣ್ಣ (1952) ಜಾನಪದ ವಿದ್ವಾಂಸರು. ಮೀರಾಸಾಬಿಯಳ್ಳಿಯ ಪಟೇಲರಾದ ಪಟೇಲ್ ಬೊಮ್ಮೇಗೌಡ ಅವರ ತಂದೆ. ಕರಿಯಮ್ಮ ತಾಯಿ. ಕೃಷಿಕ ಕುಟುಂಬದಲ್ಲಿ ಜನಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಬಿ.ಎ. (ಆನರ್) (1972). ಎಂ.ಎ. (1974) ಪದವಿ ಪಡೆದವರು. ಮೈಸೂರು ವಿಶ್ವವಿದ್ಯಾನಿಲಯದಿಂದ “ಕಾಡುಗೊಲ್ಲರ ಇಬ್ಬರು ಸಾಂಸ್ಕತಿಕ ವೀರರು (ಎತ್ತಪ್ಪ-ಮುಂಜಪ)- ಒಂದು ಅಧ್ಯಯನಕ್ಕಾಗಿ ಪಿಎಚ್.ಡಿ (1996) ಪದವಿ ದೊರೆಯಿತು. ಎರಡು ಬಾರಿ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ (1984-1987 ಮತ್ತು 1998-2001) ಸೇವೆ ಸಲ್ಲಿಸಿರುವ ಅವರಿಗೆ ಜಾನಪದ ಕ್ಷೇತ್ರಕಾರ್ಯಕ್ಕಾಗಿ ಜಿ.ಶಂ.ಪ ಜಾನಪದ ತಜ್ಞ ಪ್ರಶಸ್ತಿ' (2011) ನೀಡಿ ...
READ MORE