ಕೃಷ್ಣಮೂರ್ತಿ ಪುರಾಣಿಕರು ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಬರೆದಿದ್ದರೂ ಇದರ ಹೆಚ್ಚಿನ ಬರವಣಿಗೆ ಕಾದಂಬರಿ ಸಾಹಿತ್ಯದಲ್ಲಿ ಮಹಿಳೆಯರ ಅನೇಕ ಮುಖಗಳನ್ನು ಚಿತ್ರಿಸಿ ಅವರ ಸುಖ-ದುಃಖ, ಅಂತಃಕರಣ, ಸಿಟ್ಟು ಸೇಡು ಮುಂತಾದವುಗಳನ್ನೆಲ್ಲ ಬಹಳ ಹೃದಯಂಗಮವಾಗಿ ಚಿತ್ರಿಸಿ ಆಕರ್ಷಕವಾಗಿ ಕನ್ನಡ ಓದುಗರಿಗೆ ಅರ್ಪಿಸಿದ್ದಾರೆ. ಪ್ರಸ್ತುತ ಕೃಷ್ಣಮೂರ್ತಿ ಪುರಾಣಿಕರ ಸಾಮಾಜಿಕ ಕಾದಂಬರಿ ಕಣ್ಣ ಹಿಂದಿನ ಹೆಣ್ಣು. ಈ ಕಾದಂಬರಿಯೂ ಹೆಣ್ಣಿನ ಬವಣೆಗಳ ಸುತ್ತ ಹೆಣೆದಿರುವುದಾಗಿದೆ.
ಅಗ್ರಶ್ರೇಣಿಯ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕರು ಹುಟ್ಟಿದ್ದು ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ.1911 ಸೆಪ್ಟಂಬರ್ 5ರಂದು. 1933ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಪುರಾಣಿಕರು 1946ರಲ್ಲಿ 'ರಾಮೂನ ಕಥೆಗಳು' ಪ್ರಕಟಿಸಿದರು. ಅವರ 'ಧರ್ಮದೇವತೆ' ಕಾದಂಬರಿ 'ಕರುಣೆಯೇ ಕುಟುಂಬದ ಕಣ್ಣು' ಎಂಬ ಚಲನಚಿತ್ರವಾಗಿದೆ. ಪುರಾಣಿಕರ 11 ಕೃತಿಗಳು ಬೆಳ್ಳೆತೆರೆ ಕಂಡಿವೆ. 'ಸನಾದಿ ಅಪ್ಪಣ್ಣ' ಕನ್ನಡಿಗರೆಂದೂ ಮರೆಯದ ಕೃತಿ. ಮೊದಲ ಪ್ರಕಟಿತ ಗದ್ಯ ಕೃತಿ, 'ರಾಮೂನ ಕಥೆಗಳು'. ಮೊದಲ ಕವನ ಸಂಕಲನ 'ಬಾಳ ಕನಸು'. ಮೊದಲ ಕಾದಂಬರಿ 'ಮುಗಿಲಮಲ್ಲಿಗೆ'. 'ಮೌನಗೌರಿ', 'ಮುತ್ತೈದೆ', `ಮನೆ ತುಂಬಿದ ಹೆಣ್ಣು', 'ಮಣ್ಣಿನ ಮಗಳು', 'ಕುಲವಧು', 'ಮನಸೋತ ಮನದನ್ನೆ', 'ಧರ್ಮ ...
READ MORE