`ಕಣ್ಣಾ ಮುಚ್ಚೆ ಕಾಡೇ ಗೂಡೇ’ ಮಕ್ಕಳ ಕಥಾಸಂಕಲನವಾಗಿದ್ದು, ಕೃತಿಯ ಮೂಲ ಲೇಖಕ ಸಾ.ಕೆಂ. ನಾಗರಾಜ. ಲಕ್ಕೂರು ಆನಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಕೃತಿಯು ಹಲವಾರು ವಿಚಾರಗಳ ಕುರಿತು ಕತೆಯನ್ನು ಕಟ್ಟಿಕೊಡುತ್ತದೆ. ಕೃತಿಯಲ್ಲಿನ ಕತೆಯೊಂದು ಹೀಗಿದೆ; ಮೇಡಂ ಕ್ಯೂರಿ ಮಹಾವಿಜ್ಞಾನಿ, ಆದರೆ ಮೈ ತುಂಬಾ ಬಟ್ಟೆ, ಹೊಟ್ಟೆ ತುಂಬಾ ಊಟವೂ ಒಮ್ಮೊಮ್ಮೆ ಇರುತ್ತಿರಲಿಲ್ಲ. ಅಂತಹ ಬಡತನದಲ್ಲಿಯೇ ಅವಳು ಅದೆಷ್ಟು ನಿಷ್ಠೆಯಿಂದ ಸತ್ಯದ ಸಂಭೋದನೆಗೆ ತೊಡಗಿದಳು! ಅದರಿಂದ ಅವರ ಮನೆತನಕ್ಕೆ ಐದು ನೊಬೆಲ್ ಪಾರಿತೋಷಕ, ಪುರಸ್ಕಾರಗಳು ದೊರೆತವು. ಅವಳಿಗೆ ಎರಡು, ಗಂಡನಿಗೆ ಒಂದು, ಮಗಳಿಗೆ ಒಂದು ಅಳಿಯನಿಗೂ ಒಂದು, ಬಹುಶಃ ಪ್ರಪಂಚದಲ್ಲಿಯೇ ಇದೊಂದು ಅಪರೂಪದ ಘಟನೆ. ಒಂದು ದಿನ ಹಿರಿಯ ಪತ್ರಕರ್ತರು ಅವಳನ್ನು ಕಾಣಲು ಬಂದರು. ಮೇರಿ ತನ್ನ ಮನೆಯ ಮುಂದಿನ ಕೈತೋಟದಲ್ಲಿ ಕಳೆ ತೆಗೆಯುತ್ತ ಕುಳಿತಿದ್ದಳು. 'ಮೇಡಂ ಕ್ಯೂರಿ ಎಲ್ಲಿ? ಎಂದು ಆ ಪತ್ರಕರ್ತರು ಕ್ಯೂರಿಗೆ ಕೇಳಿದರು. 'ಕ್ಯೂರಿ ಮನೆಯ ಒಳಗಿಲ್ಲ. ನೀವು ಬಂದರೆ ನಿಮಗೆ ಸಂದೇಶ ಕೊಡಲು ಹೇಳಿದ್ದಾಳೆ ಎಂದು ಒಂದು ಸಂದೇಶ ಬರೆದುಕೊಟ್ಟಳು. 'ವ್ಯಕ್ತಿಗಿಂತ ವಿಶ್ವದಲ್ಲಿ ಆಸಕ್ತಿ ತಾಳಿರಿ' ಎಂಬುದೇ ಅವಳ ಸಂದೇಶವಾಗಿತ್ತು.
ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾದ ಅವರು ಸೃಜನಶೀಲ ಬರಹಗಾರ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಪ್ರಸ್ತುತ ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. ಲಕ್ಕೂರು ಆನಂದ ಅವರು ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಪ್ರಕಟಿಸಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ. ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದಿಸಿದ ಅತ್ಯುತ್ತಮ ಆತ್ಮ ಕಥೆಗಳೆಂದರೆ, ...
READ MORE