ಸಾಹಿತಿ ಹಾಗೂ ವಿಮರ್ಶಕ ಎಸ್. ದಿವಾಕರ ಅವರು ಕನ್ನಡದ ಅತಿ ಸಣ್ಣ ಕತೆಗಳನ್ನು ಸಂಪಾದಿಸಿದ ಕೃತಿ ಇದು. ಕನ್ನಡದ ಅತಿ ಸಣ್ಣ ಕಥೆಗಳ ಸ್ವರೂಪ, ತಂತ್ರಗಳು, ನಿರೂಪಣಾ ಶೈಲಿ, ಸನ್ನಿವೇಶಗಳ ವೈವಿಧ್ಯತೆ ಹಾಗೂ ವಿಮರ್ಶೆಯ ದೃಷ್ಟಿಯಿಂದ ಈ ಸಂಕಲನ ಉತ್ತಮ ಆಕರ ಕೃತಿಯಾಗಲಿದೆ.
ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು. ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...
READ MORE