ಡಾ. ಎಸ್.ಎಸ್. ಅಂಗಡಿ ಅವರ ಕೃತಿ-ಕನ್ನಡ ಗ್ರಂಥ ಸಂಪಾದನೆ ಚರಿತ್ರೆ. ಗದುಗಿನ 'ಲಿಂಗಾಯತ ಅಧ್ಯಯನ ಸಂಸ್ಥೆ'ಯಿಂದ 'ಸಮಗ್ರ ಲಿಂಗಾಯತ ಪ್ರಾಚೀನ ಅಪ್ರಕಟಿತ ಸಾಹಿತ್ಯ ಪ್ರಕಟಣೆ ಯೋಜನೆ' ಮತ್ತು ಮೈಸೂರಿನ ಸುತ್ತೂರು ಮಠದಿಂದ 'ಸಮಗ್ರ ಸ್ವರವಚನ ಸಾಹಿತ್ಯ ಪ್ರಕಟನ ಯೋಜನೆ'ಯ ಮೂಲಕ ಪ್ರಕಟಿತ 10 ಸಂಪುಟಗಳು ಹೀಗೆ ಕನ್ನಡ ಗ್ರಂಥ ಸಂಪಾದನೆಯ ಇತಿಹಾಸವನ್ನು ಲೇಖಕರು ಇಲ್ಲಿ ಚರ್ಚಿಸಿದ್ದಾರೆ.
ಪ್ರೊ. ಎಸ್.ಎಸ್. ಅಂಗಡಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಪ್ರಾಧ್ಯಾಪಕರು. ಪ್ರಾಚೀನ ಸಾಹಿತ್ಯ, ಹಸ್ತಪ್ರತಿ ಗ್ರಂಥ ಸಂಪಾದನೆ, ಭಾಷಾಶಾಸ್ತ್ರ ಬಗೆಗೆ ಅಪಾರ ಪಾಂಡಿತ್ಯ ಹೊಂದಿರುವ ಅವರು 'ಸರಳ ಶಬ್ದಮಣಿ ದರ್ಪಣ', 'ಕನ್ನಡ ಹಸ್ತಪ್ರತಿ ಭಾಷಿಕ ವಿವೇಚನೆ', 'ಕರ್ನಾಟಕ ಗ್ರಂಥ ಸಂಪಾದನೆ', 'ಸರಳ ಕವಿರಾಜಮಾರ್ಗ' ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರು ಪ್ರಕಟಿಸಿದ ಸಂಶೋಧನಾ ಲೇಖನಗಳು ಹೀಗಿವೆ: ಗ್ರಂಥಸಂಪಾದನೆ : ಕೆ.ಜಿ.ಕುಂದಣಗಾರ, ಕೆ.ಜಿ.ಕುಂದಣಗಾರ ಅಧ್ಯಯನ ವಿಧಾನ, ಹರ್ಮನ್ ಮೋಗ್ಲಿಂಗ್ ಸಂಶೋಧನ ವೈಧಾನಿಕತೆ, ಗ್ರಂಥ ಸಂಪಾದನೆ: ಶಿ.ಚ.ನಂದಿಮಠ, ಗ್ರಂಥ ಸಂಪಾದನೆ: ಗೊರೆಬಾಳ್ ಹನುಮಂತರಾಯ, ಗ್ರಂಥ ಸಂಪಾದನೆ: ಎನ್.ಅನಂತರಂಗಾಚಾರ್, ಕರ್ನಾಟಕ ಕವಿಚರಿತೆ: ರಚನೆಯ ...
READ MORE