ಮಹಾಕವಿ ಲಕ್ಷ್ಮೀಶನ ಜೈಮಿನಿ ಭಾರತವನ್ನು ವಿದ್ವಾಂಸರಾದ ದೇವುಡು ನರಸಿಂಹಶಾಸ್ತ್ರಿ ಹಾಗೂ ಬಿ. ಶಿವಮೂರ್ತಿ ಶಾಸ್ತ್ರಿ ಸಂಪಾದಿಸಿದ ಈ ಕೃತಿ. ಮುನ್ನುಡಿ ಬರೆದಿರುವ ಮೈಸೂರು ಸಂಸ್ಥಾನದ ಮುಖ್ಯಮಂತ್ರಿ ಕೆ. ಹನುಮಂತರಾಯ ‘ ಕನ್ನಡ ಸಾಹಿತ್ಯದಲ್ಲಿ ನಾರಾಯಣಪ್ಪನ ಗದುಗಿನ ಭಾರತ ಹಾಗೂ ಲಕ್ಷ್ಮೀಶನ ಜೈಮಿನಿ ಭಾರತ ಎಂಬ ಕೃತಿಗಳು ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಪಿರಾಮಿಡ್ಡುಗಳಿದ್ದ ಹಾಗೆ ಅದ್ಭುತಗಳು. ಇವನ್ನು ಸಂಪಾದಿಸಿರುವ ವಿದ್ವಾಂಸರು ಕನ್ನಡಾಸಕ್ತರ ಹೆಮ್ಮೆಯನ್ನು ಇಮ್ಮಡಿಗೊಳಿಸಿದ್ದಾರೆ ಎಂದು ಪ್ರಶಂಸಿದ್ದಾರೆ. ಲಕ್ಷ್ಮೀಶ ಕವಿಯ ಕಾಲ-ದೇಶ-ಬಿರುದುಗಳು ಸೇರಿದಂತೆ ಸಮಗ್ರ ಮಾಹಿತಿಯೂ ಒಳಗೊಂಡ ಕೃತಿಯು ಈ ಕವಿಯ ಸಾಹಿತ್ಯ ರಚನೆಯ ವಿರಾಟ ಸ್ವರೂಪವನ್ನು ತೋರುತ್ತದೆ.
ಮೈಸೂರು ಸಂಸ್ಥಾನ ಮತ್ತು ಸಾಹಿತ್ಯ ಇಲಾಖೆಯು 1956ರಲ್ಲಿ ಮೊದಲ ಬಾರಿಗೆ ಪ್ರಕಟಿಸಿತ್ತು.
’ಮಹಾಕಾದಂಬರಿಕಾರ’ ಎಂದು ಹೆಸರುವಾಸಿಯಾಗಿದ್ದ ದೇವುಡು ನರಸಿಂಹಶಾಸ್ತ್ರಿಗಳು ಶಿಕ್ಷಕರಾಗಿ, ಸಂಪಾದಕರಾಗಿ, ನಟರಾಗಿ, ವಿಮರ್ಶಕರಾಗಿ ತಮ್ಮ ಪ್ರತಿಭೆ- ಪಾಂಡಿತ್ಯ ಮೆರೆದಿದ್ದರು. ನರಸಿಂಹ ಶಾಸ್ತ್ರಿಗಳು ಜನಿಸಿದ್ದು ಮೈಸೂರಿನ ರಾಜಪುರೋಹಿತರ ಮನೆತನದಲ್ಲಿ. 1896ರ ಡಿಸೆಂಬರ್ 26ರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡರು. ತಾಯಿಯ ಆಸರೆಯಲ್ಲಿ ಬೆಳೆದ ನರಸಿಂಹಶಾಸ್ತ್ರಿಗಳು ತೀಕ್ಷ್ಣ ಬುದ್ಧಿಯುಳ್ಳವರಾಗಿದ್ದರು. ಹನ್ನೆರಡನೆಯ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದಂತಹ ಕಾವ್ಯ ಮತ್ತುಭಾಗವತದಂತಹ ಪುರಾಣಗಳನ್ನು ಓದಿ ಅರಿತಿದ್ದರು. ಹದಿನೈದನೆಯ ವಯಸ್ಸಿನಲ್ಲಿಯೇ ಛಂದೋಬದ್ಧವಾಗಿ ಕಾವ್ಯ ರಚಿಸುವ ಹವ್ಯಾಸ ಬೆಳೆಸಿಕೊಂಡರು. ಸಾಂಪ್ರದಾಯಿಕ ವೈದಿಕ ವಿದ್ಯೆಯ ಜೊತೆಯಲ್ಲಿಯೇ ಬಿ.ಎ., ಎಂ.ಎ. ಪದವಿಯನ್ನು ಸಂಸ್ಕೃತ ಹಾಗೂ ಭಾರತೀಯ ತತ್ವಶಾಸ್ತ್ರದಲ್ಲಿ ಪಡೆದಿದ್ದರು. ಸರ್ವಪಲ್ಲಿ ...
READ MORE