ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ ಅವರ ಕೃತಿ-ಕನ್ನಡ ಕಾವ್ಯ ಸಂಗ್ರಹ. ಹೆಸರೇ ಸೂಚಿಸುವಂತೆ ಕನ್ನಡದ ಶ್ರೇಷ್ಠ ಕವನಗಳನ್ನು ಸಂಕಲಿಸಿದ ಕೃತಿ ಇದು. ಕನ್ನಡ ಕಾವ್ಯವು ಸಾಗಿ ಬಂದ ಹಾದಿಯನ್ನು ವಿಮರ್ಶಿಸಲು ಈ ಕೃತಿ ಉತ್ತಮ ಆಕರ ಗ್ರಂಥವಾಗಲಿದೆ. ಕನ್ನಡದ ಕಾವ್ಯದ ಸಮಗ್ರ ಚಿತ್ರಣ ನೀಡುತ್ತದೆ. .
ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...
READ MORE