ಯು.ಆರ್. ಅನಂತಮೂರ್ತಿಯವರ ‘ಕನ್ನಡ ಕರ್ನಾಟಕ’ ಕೃತಿಯು ಕರ್ನಾಟಕದ ಕುರಿತ ಚಿಂತನೆಗಳನ್ನು ಒಳಗೊಂಡಿದೆ. ತುಮಕೂರಿನಲ್ಲಿ ನಡೆದ 69ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅನಂತಮೂರ್ತಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದಾಗ ಬಿಡುಗಡೆಗೊಂಡ ಕೃತಿ ಇದಾಗಿದೆ. ಈ ಕೃತಿ ಮಹತ್ವದ ಸಾಂಸ್ಕೃತಿಕ ದಾಖಲೆ ಎನ್ನುವ ಹೆಸರನ್ನು ಪಡೆದಿತ್ತು. ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಕೃತಿಯು ಮರುಮುದ್ರಣಗೊಂಡಿರುತ್ತದೆ.
ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...
READ MORE