ಜಿ. ಕೃಷ್ಣಪ್ಪ ಹಾಗೂ ಟಿ.ಎನ್ ವಾಸುದೇವಮೂರ್ತಿ ಅವರ ’ ಅಂಬಿಕಾತನಯದತ್ತರ ಕನ್ನಡ ಮೇಘದೂತ ಒಂದು ಸಹಪಯಣ’ ಕೃತಿಯು ಲೇಖನಸಂಕಲನವಾಗಿದೆ. ಅಂಬಿಕಾತನಯದತ್ತರ ಕುರಿತ ಹಲವಾರು ವಿಚಾರಗಳು ಇಲ್ಲಿ ಪ್ರಸ್ತುತವಾಗುತ್ತದೆ. ಕಾಮಿ ಯಕ್ಷನು ವಿರಹದಿಂದ ಕವಿಯಾಗುವನು. ಅವನ ಕಣ್ಣು ಚೆಲುವಿಗೆ ಕಣ್ಣಾಗುವುದು. ಅವನ ಹೃದಯ ರಸಕ್ಕೆ ನೆಲೆಯಾಗುವುದನ್ನು ಕಾಳಿದಾಸ ಈ ಮನಃಪರಿಷಾಕವನ್ನು ಬಹು ರಮ್ಯವಾಗಿ, ಧ್ವನಿಪೂರ್ಣವಾಗಿ ಚಿತ್ರಿಸಿದ್ದಾನೆ. ಧರ್ಮಾವಿರುದ್ಧವಾದ ಕಾಮದಲ್ಲಿ ಹುಟ್ಟಿದ ಕಾವ್ಯ ಭಕ್ತಿಯ ಸಂಕೇತವಾಗುವುದು ಅನ್ನುವ ದ.ರಾ. ಬೇಂದ್ರೆಯವರ ಮಾತುಗಳನ್ನು ಈ ಕೃತಿಯಲ್ಲಿ ವಿಶ್ಲೇಷಿಸಿಸಲಾಗಿದೆ. ಕುವೆಂಪುರವರ, ”ಮರ್ತ್ಯದಲ್ಲಿ ಅಮರ್ತ್ಯವನ್ನು ಸವಿದ ಪ್ರತಿಭೆ ಕಾಳಿದಾಸನದು. ಭಾರತೀಯ ಸಂಸ್ಕೃತಿ ಇರುವವರೆಗೆ, ಅಷ್ಟೇ ಏಕೆ, ಜಗತ್ತಿನ ಸಾಹಿತ್ಯ ಸಂಸ್ಕೃತಿಗಳಿರುವವರೆಗೆ ಕಾಳಿದಾಸನು ಚಿರನೂತನವಾಗಿ ಬಾಳುವುದರಲ್ಲಿ ಸಂಶಯವಿಲ್ಲ” ಎನ್ನುವಂತಹ ಮಾತುಗಳು ಇಲ್ಲಿವೆ.
’ಬೇಂದ್ರೆ ಕೃಷ್ಣಪ್ಪ’ ಎಂದೇ ಜನಪ್ರಿಯರಾಗಿರುವ ಡಾ. ಜಿ.ಕೃಷ್ಣಪ್ಪ ಅವರು ಪ್ರಮುಖ ಬೇಂದ್ರ ಸಾಹಿತ್ಯ ಪರಿಚಾರಕರು. ಕೃಷ್ಣಪ್ಪ ಅವರು 1948ರಲ್ಲಿ ಬೆಂಗಳೂರಲ್ಲಿ ಜನಿಸಿದರು. ತಂದೆ ಹೆಚ್.ಗಂಗಯ್ಯ, ತಾಯಿ ಸಾವಿತ್ರಮ್ಮ. ಜಿ.ಕೃಷ್ಣಪ್ಪ ಅವರು ಬೇರೆ ಕಾವ್ಯದ ಓದಿಗೆ ಹೊಸ ಆಯಾಮ ಪರಿಚಯಿಸಿದವರು. ಬೆಂಗಳೂರಿನ ಎಸ್.ಟಿ. ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ, ವಾಹನ ನಿರೀಕ್ಷಕರಾಗಿ ವೃತ್ತಿಯಾರಂಭಿಸಿದ ಇವರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ನಿವೃತ್ತಿ. ಉದ್ಯೋಗದ ನಡುವೆ ಬಿ.ಎ, ಎಲ್‌ಎಲ್‌ಬಿ, ಕನ್ನಡದಲ್ಲಿ ಸ್ನಾತಕೋತ್ತರ ಪದವೀಧರಾಗಿದ್ದಾರೆ. 'ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ : ಒಂದು ಅಧ್ಯಯನ ಕುರಿತು ಪಿಎಚ್ಡಿ ಪದವಿಯನ್ನು ಮಾಡಿದ್ದಾರೆ.ಸಾಹಿತ್ಯದ ಓದು, ಬೇಂದ್ರೆ ಕಾವ್ಯದ ಗುಂಗೇ ಇವರ ಬರವಣಿಗೆಗೆ ...
READ MORE