ಕನ್ನಡ ಪತ್ರಿಕೋದ್ಯಮ: ಮೂವತ್ತು ವರ್ಷ

Author : ಪದ್ಮರಾಜ ದಂಡಾವತಿ

₹ 300.00




Year of Publication: 326
Published by: ಗೀತಾಂಜಲಿ ಪುಸ್ತಕ ಪ್ರಕಾಶನ
Address: ಕಂದಾಯ ಭವನ, 100 ಅಡಿ ರಸ್ತೆ, ರಾಜೇಂದ್ರನಗರ, ಶಿವಮೊಗ್ಗ
Phone: 9449886390

Synopsys

ಪದ್ಮರಾಜ ದಂಡಾವತಿ ಅವರ ಕೃತಿ ʻಕನ್ನಡ ಪತ್ರಿಕೋದ್ಯಮ: ಮೂವತ್ತು ವರ್ಷʼ. ವೃತ್ತಿಯಲ್ಲಿ ಸ್ವತಃ ಪತ್ರಕರ್ತರಾಗಿರುವ ಲೇಖಕರು ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಒಳನೋಟಗಳು, ವಿಶ್ಲೇಷಣೆಗಳು 1991 ರಿಂದ 2021ರ ವರೆಗಿನ ಬದಲಾವಣೆಗಳನ್ನು ಅಧ್ಯಯನ ಮಾಡಿ ಮಾಹಿತಿಗಳನ್ನು ಇಲ್ಲಿ ವಿವರಿಸಿದ್ದಾರೆ. ಕಸುಬುದಾರ ಪತ್ರಕರ್ತನ ಇರುವು ಕಾಣಿಸುವಂತೆಯೇ ಸೂಕ್ಷ್ಮಸಂವೇದಿ ಸಮಾಜ ವಿಜ್ಞಾನಿಯ ಕಣ್ಣೋಟವೂ ಕೃತಿಯಲ್ಲಿದೆ.

About the Author

ಪದ್ಮರಾಜ ದಂಡಾವತಿ
(30 August 1955)

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ 1955ರ ಆಗಸ್ಟ್ 30 ರಂದು ಪದ್ಜರಾಜ ದಂಡಾವತಿ ಅವರು ಜನಿಸಿದರು. ತಂದೆ ದೇವೇಂದ್ರಪ್ಪ, ತಾಯಿ ಚಂಪಮ್ಮ. ಪ್ರಾಥಮಿಕ- ಪ್ರೌಢ ಹಾಗೂ ಪಿಯುಸಿ ಶಿಕ್ಷಣವನ್ನು ಮುದ್ದೇಬಿಹಾಳದಲ್ಲಿ ಮುಗಿಸಿ, ಪದವಿ ಶಿಕ್ಷಣವನ್ನು ರಾಮದುರ್ಗದಲ್ಲಿ ಪೂರೈಸಿದರು. ಧಾರವಾಡದ ಕರ್ನಾಟಕ ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದರು. ಪತ್ರಕರ್ತರಾಗಿ 1982ರಲ್ಲಿ ಪ್ರಜಾವಾಣಿ ಸೇರಿದ್ದು, ಹಂತ ಹಂತವಾಗಿ ಬಡ್ತಿ ಹೊಂದಿ ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು. ಸತತ ಎಂಟು ವರ್ಷಗಳಿಂದ ಅವರು ಪ್ರತಿ ಭಾನುವಾರ ಪ್ರಜಾವಾಣಿಯಲ್ಲಿ ಬರೆದ ‘ನಾಲ್ಕನೇ ಆಯಾಮ’ ಅಂಕಣ, ತನ್ನವಿಚಾರ-ವಿಷಯ ವೈವಿಧ್ಯತೆಯಿಂದಾಗಿ ಜನಪ್ರಿಯತೆ ಪಡೆದಿತ್ತು.  ಕೃತಿಗಳು:  ಪತ್ರಿಕಾಭಾಷೆ, ರಿಪೋರ್ಟಿಂಗ್, ಅವಲೋಕನ, ನಾಲ್ಕನೇ ಆಯಾಮ(ಆರು ...

READ MORE

Related Books