ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಬರೆದ ಕೃತಿ-ಕನ್ನಡ ಪ್ರಬಂಧಗಳು. ಜೀವನದಲ್ಲಿ ಶಿಸ್ತು, ಭಾಷಾ ಪ್ರೇಮ, ಶಾಲಾ ಹಂತದಲ್ಲಿ ಕ್ರೀಡೆಗಳು, ಕರ್ನಾಟಕದಲ್ಲಿ ಶಿಲ್ಪಕಲೆ ಹೀಗೆ 30 ಪ್ರಬಂಧಗಳು ಇಲ್ಲಿ ಸಂಕಲಿಸಲಾಗಿದೆ. ಬಳಸಿರುವ ಭಾಷೆಯು ಸರಳವಾಗಿದ್ದು, ವಿಷಯ ಸಮೃದ್ಧವಾಗಿದೆ. ಪ್ರಬಂಧಗಳ ಶೈಲಿಗಳನ್ನು ತಿಳಿಸಿಕೊಡುವ ಇಲ್ಲಿಯ ಬರೆಹಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಒಳನೋಟವನ್ನು ನೀಡುತ್ತವೆ.
ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...
READ MORE