ಲತಾ ಗುತ್ತಿಯವರು ’ಪ್ರವಾಸ ಸಾಹಿತ್ಯ: ಅನ್ಯ ಸಂಸ್ಕೃತಿಗಳ ಅಧ್ಯಯನ’ ಎಂಬ ಶಿರೋನಾಮೆಯಿಂದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧ. ಇದಕ್ಕೆ ಪ್ರೇರಣೆಯಾದವರು ಡಾ.ಎಂ.ಎಂ.ಕಲಬುರ್ಗಿ. ಈ ಕೃತಿಯಲ್ಲಿ ಅವರ 15 ವರ್ಷಗಳ ದೇಶ ವಿದೇಶಗಳ ಸುತ್ತಾಟದ ಅನುಭವಗಳನ್ನು, ಹೊರದೇಶದ ಜನರ ಜೀವನ, ಭಾಷೆ, ಆಚರಣೆಗಳು, ಅಲ್ಲಿನ ಪ್ರಕೃತಿ ಸೌಂದರ್ಯ ಒಟ್ಟಾರೆ ಅವರು ಸುತ್ತಾಡಿದ ದೇಶಗಳ ಬಗ್ಗೆ ಸಮಗ್ರವಾದ ಅಧ್ಯಯನ ಕನ್ನಡ ಪ್ರವಾಸ ಸಾಹಿತ್ಯದ ಒಳನೋಟಗಳು ಎಂಬು ಈ ಕೃತಿಯಲ್ಲಿ ವಿವರಿಸಿದ್ದಾರೆ.
ಮೂಲತಃ ಬೆಳಗಾವಿಯವರಾದ ಡಾ. ಲತಾ ಗುತ್ತಿ ಅವರು ತಮ್ಮ ಪ್ರವಾಸ ಕಥನ ಹಾಗೂ ಕವಿತೆಗಳ ಮೂಲಕ ಚಿರಪರಿಚಿತರಿದ್ದಾರೆ. ಲತಾ ಅವರು ಜನಿಸಿದ್ದು 1953ರ ಆಗಸ್ಟ್ 12ರಂದು. ಬೆಂಗಳೂರು ಕಂಪ್ಯೂಟರ್ ಟೆಕ್ನಾಲಜಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ನಾಗನಗೌಡ, ತಾಯಿ -ಶಾಂತಾದೇವಿ ಪಾಟೀಲ. ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಿಎಚ್.ಡಿ. ಪದವಿ ಪಡೆದಿರುವ ಅವರು ಮೈಸೂರು ವಿಶ್ವವಿದ್ಯಾಲಯಿಂದ ಇಂಗ್ಲಿಷಿನಲ್ಲಿ ಎಂ.ಎ. ಪದವಿ ಪಡೆದಿದ್ದಾರೆ. ಯುರೋನಾಡಿನಲ್ಲಿ (1993), ನಾ ಕಂಡಂತೆ ಅರೇಬಿಯಾ (1995), ಅಂಡಮಾನಿನ ಎಳೆಯನು ಹಿಡಿದು (2013), ಚಿರಾಪುಂಜಿಯವರೆಗೆ (2017) ಅವರ ಪ್ರವಾಸ ಕಥನಗಳಾದರೆ ಹೆಜ್ಜೆ (2004), ಕರಿನೀರು (2015) ಕಾದಂಬರಿಗಳು. “ಪ್ರವಾಸ ಸಾಹಿತ್ಯ ...
READ MORE