ಕನ್ನಡ ತಾಯಿಗೆ ನುಡಿನಮನ

Author : ಎಲ್.ಎಸ್. ಶೇಷಗಿರಿರಾವ್

Pages 139

₹ 20.00




Year of Publication: 1993
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಆದಿ ಕವಿ ಪಂಪನಿಂದ ಪ್ರಾರಂಭಿಸಿ ಒಂದು ಸಾವಿರ ವರ್ಷಗಳಿಂದ ಕನ್ನಡ ಕವಿಗಳು ಕನ್ನಡ ನಾಡು, ನುಡಿ, ಸಂಸ್ಕೃತಿಗಳ ಕಂಡು ರೋಮಾಂಚನಗೊಂಡು ಹಾಡಿದ್ದಾರೆ, ಹೊಗಳಿದ್ದಾರೆ. ಕನ್ನಡ ಸಂಸ್ಕೃತಿಯ ಸತ್ವವನ್ನು ಇಲ್ಲಿ ಕಾವ್ಯ ಭಾಷೆಯಲ್ಲಿ ವಿವರಿಸಲಾಗಿದೆ. ಈ ಕೃತಿಯು ಎರಡು ಅಧ್ಯಾಯಗಳನ್ನು ಹೊದಿದ್ದು ಅವೆಂದರೆ: ಪೂರ್ವ ಕವಿಗಳು ,ಆಧುನಿಕ ಕವಿಗಳು

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books