ಕನ್ನಡ ವೈದ್ಯಕೀಯ ಪದಗಳ ಸಮಸ್ಯೆ ಮತ್ತು ಪರಿಹಾರ

Author : ನಾ. ಸೋಮೇಶ್ವರ

Pages 129

₹ 50.00




Published by: ಪ್ರತಿಭಾ ಪ್ರಕಾಶನ
Address: ಮೈಸೂರು

Synopsys

‘ಕನ್ನಡ ವೈದ್ಯಕೀಯ ಪದಗಳ ಸಮಸ್ಯೆ ಮತ್ತು ಪರಿಹಾರ’ ಕೃತಿಯು ನಾ ಸೋಮೇಶ್ವರ ಅವರ ಬರಹಗಳ ಸಂಕಲನವಾಗಿದೆ. ಈ ಕೃತಿಯು ಅನೇಕ ವೈದ್ಯಕೀಯ ಬರಹಗಳ ಕುರಿತು ಬೆಳಕನ್ನು ಚೆಲ್ಲುತ್ತದೆ. ಅರಿವು ಎಲ್ಲರ ಹಕ್ಕು, ಇಂಗ್ಲೀಷರು ಎಡವಿದ ಕತೆ, ಪಾರಿಭಾಷಿಕ ಪದಗಳ ಗುಣ ಲಕ್ಷಣಗಳು, ಠಂಕ ಸೂತ್ರಗಳು, ಕನ್ನಡ ವೈದ್ಯಕೀಯ ಪರಿಭಾಷಿಕ ಪದಗಳು, ಎನ್ನುವ ಈ ಅಧ್ಯಾಯಗಳಲ್ಲಿ ಲೇಖಕರು ತಮ್ಮ ಕೃತಿಯ ವಸ್ತುವನ್ನು ವಿವರಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳಿಗೆ, ವೈದ್ಯ ಸಾಹಿತ್ಯದಲ್ಲಿ ಆಸಕ್ತಿಯುಳ್ಳ ಜನಸಾಮಾನ್ಯರಿಗೆ ಉಪಯುಕ್ತವಾದ ಪುಸ್ತಕ ಇದಾಗಿದೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books