ಲೇಖಕ ಬೆ.ಗೋ. ರಮೇಶ್ ಅವರು ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳನ್ನು ಪರಿಚಯಿಸುವ ಉದ್ದೇಶದೊಂದಿಗೆ ವಿಶೇಷವಾಗಿ, ಮಕ್ಕಳನ್ನು ದೃಷ್ಟಿಯಲ್ಲಿಟ್ಟು ರಚಿಸಲಾದ ಕೃತಿ ಇದು. ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ.ಗೋಕಾಕ್ , ಯು.ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ ಕಂಬಾರರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಇಡೀ ಇಂಡಿಯಾದಲ್ಲಿ ಭಾಷಾವಾರು ಸಾಹಿತ್ಯ ರಚನೆಯಲ್ಲಿ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದವರ ಪೈಕಿ ಕರ್ನಾಟಕವೇ ಪ್ರಥಮ. ಈ ಹಿನ್ನೆಲೆಯಲ್ಲಿ, ಈ ದಿಗ್ಗಜರನ್ನು ಅವರ ಸಾಹಿತ್ಯಕ ಎತ್ತರಗಳನ್ನು ಪರಿಚಯಿಸಲಾಗಿದೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE