ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದು ಅನೇಕ ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಿದ್ದು ಮಾತ್ರವಲ್ಲದೆ ಸಮಾಜದಲ್ಲೂ ನೂರಾರು ಮಂದಿಗೆ ಕನ್ನಡ ಸೇವೆಯ ಕಂಕಣ ತೊಡಿಸಿದ ಪ್ರೊ. ಎಸ್. ವಿ. ಪರಮೇಶ್ವರ ಭಟ್ಟರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸುವ ಕಿರು ಹೊತ್ತಿಗೆ ಇದಾಗಿದೆ. ಕಾಂತಾವರ ಕನ್ನಡ ಸಂಘದ ವತಿಯಿಂದ ’ನಾಡಿಗೆ ನಮಸ್ಕಾರ’ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ 111ನೇ ಪುಷ್ಪವಾಗಿ ಅರಳಿರುವ ಈ ಹೊತ್ತಿಗೆ ಎಸ್. ವಿ. ಪಿ. ಯವರ ಹಿರಿಯ ಸಾಧನೆಗಳನ್ನು - ಅದರಲ್ಲೂ ಸಂಸ್ಕೃತದಿಂದ ಕನ್ನಡಕ್ಕೆ ಮಾಡಿರುವ ಅನುವಾದಗಳನ್ನು ಚಿಕ್ಕದಾಗಿ, ಆದರೂ ಚೊಕ್ಕವಾಗಿ ಪರಿಚಯ ಮಾಡಿಕೊಡುತ್ತದೆ.
ಮಲೆನಾಡಿನ ಕೊಪ್ಪ ತಾಲೂಕಿನ ಹುಲಿಯಾಳಿ ಗ್ರಾಮದ ವಿಶ್ವಾಸ ಅವರು ಸಂಸ್ಕೃತ ವಿದ್ವಾಂಸರು. ಎಂ.ಎ. ಮತ್ತು ಪಿ.ಹೆಚ್.ಡಿ. ಪದವೀಧರರು. ಸಂಸ್ಕೃತ - ಕನ್ನಡ ಎರಡೂ ಭಾಷೆಗಳಲ್ಲಿ ಕೃಷಿ ಮಾಡಿದ್ದಾರೆ. ಎಸ್. ಎಲ್. ಭೈರಪ್ಪನವರ ‘ಆವರಣ’ ಕಾದಂಬರಿಯ ಸಂಸ್ಕೃತ ಅನುವಾದಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ, ‘ದಾಟು’ ಕಾದಂಬರಿಯ ಸಂಸ್ಕೃತ ಅನುವಾದಕ್ಕಾಗಿ ಉತ್ತರಪ್ರದೇಶ ಸಂಸ್ಕೃತ ಅಕಾಡೆಮಿ ಹಾಗೂ ಸಂಸ್ಕೃತದಲ್ಲಿ ಬಾಲಸಾಹಿತ್ಯಕ್ಕಾಗಿಯೂ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದಲೂ ಪುರಸ್ಕೃತರಾಗಿದ್ದಾರೆ. ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಿಂದ ‘ವಾಚಸ್ಪತಿ’ (ಡಿ.ಲಿಟ್) ಪದವೀಧರರು. ಸಾಹಿತಿ ಎಚ್. ಆರ್. ವಿಶ್ವಾಸ ಪ್ರಸ್ತುತ ಮಂಗಳೂರಿನ ಸಂಘನಿಕೇತನದಲ್ಲಿ ಅಖಿಲ ಭಾರತ ಪ್ರಶಿಕ್ಷಣ ಪ್ರಮುಖರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಿಎಚ್.ಡಿ. ...
READ MORE