ಕರಿಮಾಯಿ

Author : ಚಂದ್ರಶೇಖರ ಕಂಬಾರ

Pages 218

₹ 150.00




Year of Publication: 1975
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560 004
Phone: 26617100, 26617755

Synopsys

ಚಂದ್ರಶೇಖರ ಕಂಬಾರರ ಮೊದಲ ಕಾದಂಬರಿ ಕರಿಮಾಯಿ. ಇದೊಂದು ಸೊಗಸಾದ ಓದಿಗೆ ಅನುವು ಮಾಡಿಕೊಡುವ ಕಾದಂಬರಿ. ಗ್ರಾಮೀಣದ ಬದುಕಿನಲ್ಲಿ ಸಂಭವಿಸುವ ಘಟನೆಗಳನ್ನು ಕಂಬಾರರು ಚಿತ್ರವತ್ತಾಗಿ ಕಟ್ಟಿಕೊಟ್ಟಿದ್ದಾರೆ. ಕಂಬಾರರ ಕಲ್ಪನೆಯಲ್ಲಿ ಅರಳಿ ಶಿವಾಪುರ ನಕಾಶೆಯಲ್ಲಿ ಇರುವ ಊರಲ್ಲ. ಇದೊಂದು ಕಾಲ್ಪನಿಕ ಗ್ರಾಮ.

ಕಾದಂಬರಿಯ ಬಗ್ಗೆ ವಿಮರ್ಶಕ ಟಿ.ಪಿ. ಅಶೋಕ್ ಅವರ ಅಭಿಪ್ರಾಯ ಹೀಗಿದೆ.

’ಕರಿಮಾಯಿ' ಕೇವಲ ತನ್ನ ಕಥನ ಸ್ವರೂಪದಲ್ಲಿ ಆಧುನಿಕ ಓದುಗರನ್ನು ಮೆಚ್ಚಿಸಬಯಸುವ ಕೃತಿಯಲ್ಲ. ಅದು ಅನೇಕ ಮುಖ್ಯ ಸಂಗತಿಗಳನ್ನು ತನ್ನ ಮೈಮೇಲೆ ಹಾಕಿಕೊಂಡಿರುವ ಮಹತ್ವಾ ಕಾಂಕ್ಷಿ ರಚನೆ. ಹೊಸ ಮೌಲ್ಯಗಳ ಪ್ರವೇಶದಿಂದ ಒಂದು ನಂಬಿಕೆಗಳ ಲೋಕ ಕಂಪಿಸುವ, ಸಮುದಾಯ ಪ್ರಜ್ಞೆ ಆಘಾತಕ್ಕೆ ಒಳಗಾಗುವ, ಹೊಸದೊಂದು ಆರ್ಥಿಕ ಸಾಮಾಜಿಕ ಜೀವನ ಕ್ರಮದ ಮುನ್ಸೂಚನೆ ಕಾಣಿಸುವ ಚಿತ್ರಗಳನ್ನು ಅದು ದಟ್ಟವಾಗಿ ಆದರೆ ತನಗೇ ಅನನ್ಯವೆನ್ನಿಸುವ ಕಾಮಿಕ್ ಧಾಟಿಯಲ್ಲಿ ಕಟ್ಟಿಕೊಡುತ್ತದೆ. 'ಕರಿಮಾಯಿ'ಯ ಮಿಥ್ ಒಡೆಯುವುದಕ್ಕೂ, ಶಿವಾಪುರದ ಜನರ ಸಮುದಾಯ ಪ್ರಜ್ಞೆ ಅಳ್ಳಕಗೊಳ್ಳುವುದಕ್ಕೂ ಸಂಬಂಧ ಇದ್ದೇ ಇದೆ. ಹೊಸ ಮೌಲ್ಯಗಳು ಕೇವಲ ಗ್ರಾಮಪಂಚಾಯಿತಿ ಮೂಲಕ ಬರುವುದಿಲ್ಲ. ಅವು ಬೆಳಗಾವಿ ಸೃಷ್ಟಿಸುವ ಹೊಸ ಕನಸುಗಳ ರೂಪದಲ್ಲಿಯೂ ಬರುತ್ತವೆ. ಗುಡಸೀಕರ ಶಿವಾಪುರಕ್ಕೆ ತರುವ ವಿದೇಶೀ ಬ್ರಾಂದಿ, ಸಿಗರೇಟು ಮುಂತಾದ ಅನೇಕ ಭೌತಿಕ ವಸ್ತುಗಳ ರೂಪದಲ್ಲಿ ಕಾಣಿಸಿಕೊಳ್ಳುವಂತೆ, ಪೊಲೀಸ್ ಸ್ಟೇಷನ್, ಕೋರ್ಟ್ ಮುಂತಾದ ವಸಾಹತುಶಾಹಿ ಸಂಸ್ಥೆಗಳ ರೂಪದಲ್ಲಿಯೂ ವ್ಯಕ್ತವಾಗುತ್ತವೆ. ಒಂದು ಕಡೆ ಬ್ರಿಟಿಷ್ ಸರಕಾರ; ಇನ್ನೊಂದು ಕಡೆ ಗಾಂಧಿ ನೇತೃತ್ವದ ಸ್ವಾತಂತ್ರ್ಯ ಚಳುವಳಿ. ಒಂದು ಪರಂಪರಾಗತ ಜಮೀನ್ದಾರಿ ವ್ಯವಸ್ಥೆಗೆ ಒಗ್ಗಿಹೋದ ಜನಪದಕ್ಕೆ ಈ ಎರಡೂ ಹೊಸವು; ಅನ್ಯ ಸ್ವಾರಸ್ಯದ ಸಂಗತಿ ಎಂದರೆ ಹಳೆಯ ವ್ಯವಸ್ಥೆಯ ಪ್ರತಿನಿಧಿಯಾದ ಗೌಡ, ಹೊಸ ವ್ಯವಸ್ಥೆಯ ಪ್ರತಿನಿಧಿಯಾದ ಗುಡಸೀಕರ ಇಬ್ಬರೂ ಗಾಂಧಿಯನ್ನು ನೆನಸುತ್ತಾರೆ! ಕಾದಂಬರಿಯು ವಸಾಹತುಶಾಹಿ ಕೌರವನ್ನೂ, ಸ್ವರಾಜ್ಯದ ಹಂಬಲಿಕೆಯನ್ನೂ ಸೂಕ್ಷ್ಮವಾಗಿ ಧ್ವನಿಸುತ್ತದೆ. ಹಳೆಯ ವ್ಯವಸ್ಥೆ ಅದೆಷ್ಟೇ ಸುಂದರವಾಗಿ ತೋರುತ್ತಿರಲಿ, ಹೊಸ ವ್ಯವಸ್ಥೆ ಎಷ್ಟೇ ಭಯಾನಕವಾಗಿ ಕಾಣಿಸುತ್ತಿರಲಿ ಅಥವಾ ಅದರ ಬಗ್ಗೆ ವಿರೋಧವಿರಲಿ, ಚಲನೆ ಅನಿವಾರ್‍ಯವೆಂಬ ಸತ್ಯವನ್ನು ಒಂದು ನಿರ್ಣಾಯಕ ಐತಿಹಾಸಿಕ ಸಂದರ್ಭದ ಹಿನ್ನೆಲೆಯಲ್ಲಿ ಕಾದಂಬರಿ ಧ್ವನಿಸುತ್ತದೆ.

About the Author

ಚಂದ್ರಶೇಖರ ಕಂಬಾರ
(02 January 1937)

ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜಾನಪದ ವಿದ್ವಾಂಸರಾದ   ಚಂದ್ರಶೇಖರ ಕಂಬಾರರು ಜನಿಸಿದ್ದು 1937 ಜನವರಿ 2 ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ.  ಅವರ ವಿದ್ಯಾಬ್ಯಾಸ ಗೋಕಾಕ್, ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಯಿತು.  ಗೋಕಾಕ ಮತ್ತು ಬೆಳಗಾವಿಯ ಬ್ರಿಟಿಷರ ಭಯದ ನೆರಳು ಆವರಿಸಿದ್ದ ಪರಿಸರದಿಂದ ಲೇಖಕನಾಗಿ ಮೈಪಡೆದ ಕಂಬಾರರ ಬಾಲ್ಯದ ಆತಂಕಗಳು ಅವರ ಕೃತಿಗಳಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತವೆ.  ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಬಂದು ಎಂ.ಎ ಮತ್ತು  ಪಿ.ಎಚ್.ಡಿ ಪದವಿಗಳನ್ನು ಪಡೆದರು.  ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ (1968-69), ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (1971-1991) ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು.  ಹಂಪಿಯ ...

READ MORE

Related Books