ಹಿರಿಯ ಸಾಹಿತಿ ದೇವುಡು ನರಸಿಂಹ ಶಾಸ್ತ್ರಿಗಳು ಬರೆದ ಕೃತಿ-ಕರ್ಣಾಟಕ ಸಂಸ್ಕೃತಿ. ಸುಮಾರು 20 ಶತಮಾನದಿಂದ ಹರಿದು ಬಂದ ಕರ್ಣಾಟಕದ ಸಂಸ್ಕೃತಿಯನ್ನು ಕಟ್ಟಿಕೊಡುವಲ್ಲಿ ಶ್ರಮಿಸಿದೆ. ಕನ್ನಡ ನುಡಿಯ ಅಚ್ಚು(Idiom), ಕಟ್ಟು (Syntex), ಬಳಕೆ (usage) ಮತ್ತು ಸೊಗಸು (Genius) ಕುಲಕುಲದ ಆಚಾರ-ವಿಚಾರ-ವ್ಯವಹಾರಗಳು, ಆಹಾರ ಪದಾರ್ಥಗಳು, ವೇಷಭೂಷಣಗಳು -ಈ ನಿಟ್ಟಿನಲ್ಲಿ ಹೆಚ್ಚು ಒತ್ತು ಕೊಡಲಾಗಿದೆ. ಕಥೆಗಳು, ಹಾಡುಗಳು, ಒಗಟು-ಒಡಪುಗಳು, ಗಾದೆಗಳು, ಆಟಗಳು, ನಂಬಿಕೆ, ಜೀವನಕ್ರಮ, ಧರ್ಮ ಈ ಮೂಲಕ ಕರ್ಣಾಟಕ ಸಂಸ್ಕೃತಿಯನ್ನು ಕಾಣಿಸುವ ಪ್ರಯತ್ನ ಮಾಡಲಾಗಿದೆ.
’ಮಹಾಕಾದಂಬರಿಕಾರ’ ಎಂದು ಹೆಸರುವಾಸಿಯಾಗಿದ್ದ ದೇವುಡು ನರಸಿಂಹಶಾಸ್ತ್ರಿಗಳು ಶಿಕ್ಷಕರಾಗಿ, ಸಂಪಾದಕರಾಗಿ, ನಟರಾಗಿ, ವಿಮರ್ಶಕರಾಗಿ ತಮ್ಮ ಪ್ರತಿಭೆ- ಪಾಂಡಿತ್ಯ ಮೆರೆದಿದ್ದರು. ನರಸಿಂಹ ಶಾಸ್ತ್ರಿಗಳು ಜನಿಸಿದ್ದು ಮೈಸೂರಿನ ರಾಜಪುರೋಹಿತರ ಮನೆತನದಲ್ಲಿ. 1896ರ ಡಿಸೆಂಬರ್ 26ರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡರು. ತಾಯಿಯ ಆಸರೆಯಲ್ಲಿ ಬೆಳೆದ ನರಸಿಂಹಶಾಸ್ತ್ರಿಗಳು ತೀಕ್ಷ್ಣ ಬುದ್ಧಿಯುಳ್ಳವರಾಗಿದ್ದರು. ಹನ್ನೆರಡನೆಯ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದಂತಹ ಕಾವ್ಯ ಮತ್ತುಭಾಗವತದಂತಹ ಪುರಾಣಗಳನ್ನು ಓದಿ ಅರಿತಿದ್ದರು. ಹದಿನೈದನೆಯ ವಯಸ್ಸಿನಲ್ಲಿಯೇ ಛಂದೋಬದ್ಧವಾಗಿ ಕಾವ್ಯ ರಚಿಸುವ ಹವ್ಯಾಸ ಬೆಳೆಸಿಕೊಂಡರು. ಸಾಂಪ್ರದಾಯಿಕ ವೈದಿಕ ವಿದ್ಯೆಯ ಜೊತೆಯಲ್ಲಿಯೇ ಬಿ.ಎ., ಎಂ.ಎ. ಪದವಿಯನ್ನು ಸಂಸ್ಕೃತ ಹಾಗೂ ಭಾರತೀಯ ತತ್ವಶಾಸ್ತ್ರದಲ್ಲಿ ಪಡೆದಿದ್ದರು. ಸರ್ವಪಲ್ಲಿ ...
READ MORE