ಕರ್ನಾಟಕ ಏಕೀಕರಣ ಚಳವಳಿಗೆ ಹತ್ತಿರ ಹತ್ತಿರ ನೂರು ವರ್ಷಗಳ ಇತಿಹಾಸವಿದೆ. ಈ ಚಳವಳಿಯ ಮುಂಚೂಣಿಯಲ್ಲಿ ಆಲೂರು ವೆಂಕಟರಾಯರು, ಪಾಟೀಲಪುಟ್ಟಪ್ಪನವರು, ಕುವೆಂಪು ಮುಂತಾದವರು ಹೆಸರು ಕೇಳಿರುತ್ತೇವೆ. ಆದರೆ ನಾವು ಕೇಳಿರದ ನೂರ ಐವತ್ತಕ್ಕೂ ಹೆಚ್ಚು ವ್ಯಕ್ತಿಗಳನ್ನು, ಏಕೀಕರಣಕ್ಕಾಗಿ ಅವರು ಮಾಡಿದ ಹೋರಾಟವನ್ನು ಕನ್ನಡಿಗರಿಗೆ ಪರಿಚಯಿಸುವ ಮಾಹಿತಿ ಪುಸ್ತಕದಲ್ಲಿ ಇದೆ.
ಡಾ. ಎಚ್.ಎಸ್. ಗೋಪಾಲರಾವ್ ಅವರು 1946ರ ನವೆಂಬರ್ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು. ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ. ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ. ಜೇನು ನಂಜು, ...
READ MORE