‘ಕಠಾರಿ ಅಂಚಿನ ನಡಿಗೆ’ ಚಂದ್ರಪ್ರಭ ಕಠಾರಿ ಅವರ ಅಂಕಣ ಬರಹಗಳ ಸಂಕಲನ. ಈ ಕೃತಿಗೆ ಪುರುಷೋತ್ತಮ ಬಿಳಿಮಲೆ ಅವರ ಬೆನ್ನುಡಿ ಬರಹವಿದೆ. ಕೃತಿಯ ಬಗ್ಗೆ ಬರೆಯುತ್ತಾ ‘ಚಂದ್ರಪ್ರಭ ಕಠಾರಿಯವರ ಪ್ರಸ್ತುತ ಪುಸ್ತಕ ʼಕಠಾರಿ ಅಂಚಿನ ನಡಿಗೆʼ, ಅವರು ಸಾಂದರ್ಭಿಕವಾಗಿ ಬರೆದ 34ಅಂಕಣ ಬರೆಹಗಳ ಸಂಕಲನ. ನೇರ ಮತ್ತು ಖಚಿತ ಮಾತುಗಳಿಗೆ ಹೆಸರಾಗಿರುವ ಅವರು ಈ ಪುಸ್ತಕದಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳು ಕೂಡಾ ಎಷ್ಟು ಪರಿಣಾಮಕಾರಿಯಾಗಬಲ್ಲವು ಎಂಬುದನ್ನು ಓದುಗರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ. ಹೀಗೆ ಬರೆಯಲು ಬೇಕಾದ ಧೈರ್ಯ ಅವರಲ್ಲಿರುವುದು ವಿಶೇಷವೇ ಸರಿ. ಅನೇಕರು ಗುಟ್ಟಾಗಿ ಮಾತಾಡಲೂ ಹೆದರುವ ವಿಷಯಗಳ ಬಗ್ಗೆ ಕಠಾರಿಯವರು ಇಲ್ಲಿ ಯಾವ ಸಂಕೋಚವೂ ಇಲ್ಲದೆ ಬರೆದಿದ್ದಾರೆ. ಕಠಾರಿಯವರ ಹರಿತವಾದ ವ್ಯಂಗ್ಯ-ವಿಡಂಬನೆಗಳು ವರ್ತಮಾನದ ಹಲವು ಘಟನೆಗಳ ಸುತ್ತ ಬೆಳೆದಿವೆ. ಕೋಮುವಾದ, ದ್ವೇಷ ಭಾಷಣ, ಧಾರ್ಮಿಕ ಅವಾಂತರಗಳು, ಬಡವರ ಮನೆಯ ಮೇಲೆ ಮಾತ್ರ ಹರಿಯುವ ಬುಲ್ಡೋಜರುಗಳು, ಭ್ರಷ್ಟಾಚಾರದ ಹೆಚ್ಚಳ, ಪಠ್ಯ ಪುಸ್ತಕ ರಚನೆಯ ಬಿಕ್ಕಟ್ಟುಗಳು, ಮಾಧ್ಯಮಗಳ ದಯನೀಯ ಸ್ಥಿತಿ, ದಿಢೀರನೆ ಹುಟ್ಟಿ ಮಾಯವಾದ ಉರಿಗೌಡ- ನಂಜೇಗೌಡರು, ವಾಟ್ಸಪ್ ವಿಶ್ವವಿದ್ಯಾಲಯದ ಪದವೀಧರರ ಜ್ಞಾನ ಮೀಮಾಂಸೆ, ಸುಳ್ಳುಗಳ ವಿಜೃಂಭಣೆ, ನಕಲಿ ನಾಯಕರ ಕಿತಾಪತಿಗಳು, ಸಮಾಜವನ್ನು ಹಿಂದಕ್ಕೆ ತಳ್ಳುತ್ತಿರುವ ಮೌಢ್ಯಗಳು, ರಾಜಕಾರಣಿಗಳ ಹಾಸ್ಯಾಸ್ಪದ ಹೇಳಿಕೆಗಳು, ಟ್ರೋಲ್ ಗಿರಾಕಿಗಳ ಕಷ್ಟಗಳೇ ಮೊದಲಾದ ಹಲವು ಸಂಗತಿಗಳು ಇಲ್ಲಿ ಕಠಾರಿಯವರ ಮಾತಿನೇಟಿಗೆ ಗುರಿಯಾಗಿವೆ ಎಂದಿದ್ದಾರೆ.
ಲೇಖಕ ಚಂದ್ರಪ್ರಭ ಕಠಾರಿ ವೃತ್ತಿಯಲ್ಲಿ ಸಿವಿಲ್ ಎಂಜಿನಿಯರ್. ಕತೆ, ಕವನ, ನಾಟಕ ಬರೆಯುವುದು ಹವ್ಯಾಸ. ಕಠಾರಿ ಕತೆಗಳು ( ಇಲ್ಲಿಯ ಹಲವು ಕತೆಗಳು ಸಂಕ್ರಮಣ ಸಾಹಿತ್ಯ ಪತ್ರಿಕೆ, ಈ ಭಾನುವಾರ, ಕರ್ನಾಟಕ ಸಂಘ, ಮುಂಬೈ, ಕನ್ನಡ ಸಾಹಿತ್ಯ ಪರಿಷತ್ ಪ್ರಕಟಿಸಿದ ಕೋಲ್ಮಿಂಚು, ಕಥಾ ಸರ್ಧೆಗಳಲ್ಲಿ ಬಹುಮಾನ ಪಡೆದಿವೆ.) ಮತ್ತು ಅಂಬು ( ನಾಟಕ) ಪ್ರಕಟವಾಗಿವೆ. ...
READ MORE