ಕಥೆ: ಬರೆಯುವವನ ಅನುಭವದಲ್ಲಿ

Author : ಯಶವಂತ ಚಿತ್ತಾಲ

Pages 36

₹ 20.00




Year of Publication: 2007
Address: ಮಾಸ್ತಿ ಮನೆ, 2ನೇ ಕ್ರಾಸ್‌ (ಡಾ. ಮಾಸ್ತಿ ವೆಂಕಟೇಶ್ವರ ಅಯ್ಯಂಗಾರ್‌ ರಸ್ತೆ), ಬೆಂಗಳೂರು- 560019
Phone: 26609687

Synopsys

ಮಾಸ್ತಿ ಅಧ್ಯಯನ ಪೀಠ ಆಯೋಜಿಸಿದ್ದ ʻ2007ನೇ ಮಾಸ್ತಿ ಸ್ಮಾರಕ ವಿಶೇಷ ವಾರ್ಷಿಕ ಉಪನ್ಯಾಸʼ ಕಾರ್ಯಕ್ರಮದ ಕುರಿತಾಗಿ ಲೇಖಕ ಯಶವಂತ ಚಿತ್ತಾಲ ಅವರು ರಚಿಸಿದ ಕೃತಿ ʻಕಥೆ: ಬರೆಯುವವನ ಅನುಭವದಲ್ಲಿʼ. ಪುಸ್ತಕದಲ್ಲಿ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಅವರ ಸಾಹಿತ್ಯದ ಅಭಿರುಚಿ ಜೊತೆಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಅತಿಥಿಗಳು ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಬಗ್ಗೆ ಮಾಡಿದ ಭಾಷಣ, ಉಪನ್ಯಾಸ, ಪೀಠದ ಕಾರ್ಯಚಟುವಟಿಕೆಗಳು ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡಲಾಗಿದೆ. ಜೊತೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದ ಕೆಲವು ಛಾಯಾಚಿತ್ರಗಳನ್ನೂ ಸೇರಿಸಿದ್ದಾರೆ.

About the Author

ಯಶವಂತ ಚಿತ್ತಾಲ
(03 August 1928 - 22 March 2014)

ತಮ್ಮ ಸಣ್ಣಕತೆಗಳ ಮೂಲಕ ಆಧುನಿಕ ಕನ್ನಡ ಕಥಾಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು ಯಶವಂತ ಚಿತ್ತಾಲ.  ಅವರೊಬ್ಬ ಮಹತ್ವದ ಲೇಖಕ. ನವ್ಯ ಸಾಹಿತ್ಯದ ಪ್ರಮುಖ ಕತೆಗಾರ ಚಿತ್ತಾಲರು ಕತೆ ಹೇಳುವುದರಲ್ಲಿ ಸಿದ್ಧಹಸ್ತರು. ಕತೆಗಳ ಮೂಲಕ ಬರವಣಿಗೆ ಆರಂಭಿಸಿದ ಯಶವಂತರ ಮೊದಲ ಕತೆ 'ಬೊಮ್ಮಿಯ ಹುಲ್ಲು ಹೊರೆ'. ಅವರ ಮೊದಲ ಕತೆಯನ್ನು ಕನ್ನಡದ ಮಹತ್ವದ ಕತೆಗಳಲ್ಲಿ ಒಂದು ಗುರುತಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಹನೇಹಳ್ಳಿಯವರಾದ ಯಶವಂತ ಅವರು 1928ರ ಆಗಸ್ಟ್ 3ರಂದು ಜನಿಸಿದರು. ತಂದೆ ವಿಠೋಬ, ತಾಯಿ ರುಕ್ಕಿಣಿ. ಖ್ಯಾತ ಕವಿ ಗಂಗಾಧರ ಚಿತ್ತಾಲರು ಅವರ ಹಿರಿಯ ಸಹೋದರ. ಹನೇಹಳ್ಳಿ, ಕುಮಟೆ, ಧಾರವಾಡ, ಮುಂಬಯಿಗಳಲ್ಲಿ ...

READ MORE

Related Books