ಕವಲು

Author : ಎಸ್.ಎಲ್. ಭೈರಪ್ಪ

Pages 300

₹ 365.00

Buy Now


Year of Publication: 2010
Published by: ಸಾಹಿತ್ಯ ಭಂಡಾರ
Address: ಶಾಪ್ ನಂ.8, ಜೆಎಂ ಲೇನ್, ಬಳೆಪೇಟೆ, ಬೆಂಗಳೂರು ಕರ್ನಾಟಕ 560053
Phone: 080 2287 7618

Synopsys

ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ ’ಕವಲು’ ಕಾದಂಬರಿಯು ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಪರ ಕಾನೂನುಗಳ ದುರುಪಯೋಗ, ಮಹಿಳಾ ಮಣಿಗಳ ಹೋರಾಟದ ರೀತಿ, ಆಧುನಿಕ ಮಹಿಳಾವಾದ ಕಾರಣ ಛಿದ್ರವಾಗುತ್ತಿರುವ ಭಾರತೀಯ ಕೌಟುಂಬಿಕ ವ್ಯವಸ್ಥೆಗಳ ಬಗ್ಗೆ ಕವಲಿನಲ್ಲಿ ಚೆನ್ನಾಗಿ ಮನಸ್ಸಿಗೆ ನಾಟುವಂತೆ ಚಿತ್ರಿತವಾಗಿದೆ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಕಾದಂಬರಿಯ ಪ್ರಮುಖ ಪಾತ್ರಧಾರಿಯಾದ ಜಯಕುಮಾರ ಸ್ವಂತ ಪರಿಶ್ರಮದಿಂದ ಕಂಪನಿ ಕಟ್ಟಿ ಬೆಳಸಿದ ಸಾಹಸಿ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ

ಮಹಿಳೆಯರಿಂದ ಮಹಿಳೆಗೆ ಆಗುವ ಶೋಷಣೆಗೆ ಮಹಿಳಾ ಹೋರಾಟಗಾರರು ಏನನ್ನುತ್ತಾರೆ? ಭಾರತೀಯ ಕೌಟುಂಬಿಕ ವ್ಯವಸ್ಥೆಯಲ್ಲಿ ಇಂದು ಗಂಡ ಹೆಂಡತಿ ಸಂಬಂಧಗಳಲ್ಲಿ ಪ್ರೀತಿ, ನಂಬಿಕೆ, ಭಾವನಾತ್ಮಕ ಸಂಬಂಧಗಳು ಮರೆಯಾಗಿ ಕೇವಲ ವ್ಯವಹಾರ ಮಾತ್ರ ಉಳಿದುಕೊಂಡಿದೆ ಎನ್ನುವದನ್ನು ಕವಲಿನಲ್ಲಿ ಹೇಳಿದ್ದಾರೆ. ಕಾದಂಬರಿ ಓದುತ್ತ ಹೊಗುತ್ತಿದ್ದಂತೆ ಅದರಲ್ಲಿನ ಪಾತ್ರಗಳು ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ ಎನ್ನುವಷ್ಟರ ಮಟ್ಟಿಗೆ ಆಪ್ತವಾಗಿದೆ. ಉನ್ನತ ಶಿಕ್ಷಣಗಳಲ್ಲಿ ಪಾಶ್ಚಿಮಾತ್ಯದ ಪ್ರಭಾವೋ ಏನೋ ಆಧುನಿಕ ಮಹಿಳೆಯರು, ಮುಕ್ತ ಸಂಸ್ಕೃತಿಯನ್ನು ಬಿಡಲಾಗದೆ, ಇತ್ತ ಭಾರತೀಯ ಸಂಸ್ಕೃತಿಯನ್ನು ಒಪ್ಪಿಕೊಳ್ಳಲಾಗದೆ ಒದ್ದಾಡುವ ಸಂದಿಗ್ಧ ಪರಿಸ್ಥಿತಿಯನ್ನು "ಕವಲು"ನಲ್ಲಿ ಚಿತ್ರಿಸಿದ್ದಾರೆ.

 

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books