ಕಾಯುವ ಕಾಯಕ

Author : ಎಚ್. ಡುಂಡಿರಾಜ್

Pages 229

₹ 170.00




Year of Publication: 2019
Published by: ಸಪ್ನ ಬುಕ್ಸ್‌
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು
Phone: 08040114455

Synopsys

55 ಬಾರಿ ಮುದ್ರಣವಾಗಿರುವ ಹಾಗೂ ಎಚ್.ಡುಂಡಿರಾಜ್ ಬರೆದಿರುವ ಲಘು ದಾಟಿಯ ಲೇಖನಗಳ ಕೃತಿ ’ಕಾಯುವ ಕಾಯ’. ವಿಜಯವಾಣಿಯಲ್ಲಿ ಪ್ರಕಟವಾದ ಅಂಕಣ ಬರಹಗಳ ಸಂಗ್ರಹವಾಗಿದೆ. ಸುತ್ತ ಮುತ್ತಲಿನ ವಿಷಯಗಳ ಕುರಿತು ಗಂಭೀರವಾಗಿ ಸ್ವೀಕರಿಸಿ ಅದನ್ನು ಲಘುದಾಟಿಯಲ್ಲಿ ಬರೆಯುವ ಕಲೆ ಲೇಖಕರಿಗೆ ಕರಗತವಾಗಿದ್ದನ್ನು ಈ ಕೃತಿ ಕನ್ನಡಿ ಹಿಡಿಯುತ್ತದೆ. ಆ ಮೂಲಕ ಸಮಾಜ ಹಾಗೂ ವ್ಯಕ್ತಿಗಳನ್ನು ತಿದ್ದುವ ’ಮದ್ದು’ ಆಗಿಯೂ ಇಲ್ಲಿಯ ಲೇಖನಗಳು ಪರಿಣಾಮ ಬೀರುತ್ತವೆ. 

About the Author

ಎಚ್. ಡುಂಡಿರಾಜ್
(18 August 1956)

ಎಚ್. ಡುಂಡಿರಾಜ್, ಕನ್ನಡದ ಹೆಸರಾಂತ ಚುಟುಕು ಕಾವ್ಯ ಸಾಹಿತಿ. ಈವರೆಗೆ ಸುಮಾರು 45 ಪುಸ್ತಕಗಳನ್ನು ಬರೆದಿರುವ ಇವರು, ತಮ್ಮ ಪುಸ್ತಕಗಳಲ್ಲಿ ಚುಟುಕು ಸಾಹಿತ್ಯದ ಕುರಿತಾಗಿನ ಎಳೆಗಳನ್ನು ಸೂಕ್ಷ್ಮವಾಗಿ ಬಿಡಿಸಿಟ್ಟಿದ್ದಾರೆ. ಸಾಹಿತ್ಯ ಮತ್ತು ಹಾಸ್ಯದ ಸಮ್ಮಿಲನ ಇವರ ಕೃತಿಗಳ ವಿಶೇಷತೆ.  ಉಡುಪಿ ಜೆಲ್ಲೆಯ ಹಟ್ಟಿಕುದ್ರುವಿನಲ್ಲಿ 18 ಆಗಸ್ಟ್ 1956ರಲ್ಲಿ ಜನಿಸಿದ ಇವರು, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಸದ್ಯಕ್ಕೆ ಮಂಗಳೂರಿನ ಕಾರ್ಪೋರೇಶನ್‍ ಬ್ಯಾಂಕ್‍ನ ಸಹಾಯಕ ಮಹಾ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಾ ಇದ್ದಾರೆ.  2011ರಲ್ಲಿ ನಡೆದ ಸಂಯುಕ್ತ ಅರಬ್‍ ಸಂಸ್ಥಾನದ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು, ...

READ MORE

Related Books