ಮೈಸೂರು ಸಂಸ್ಥಾನವನ್ನು 1782ರಿಂದ 1799ರವರೆಗೆ ಆಳಿದ ಟೀಪು ಸುಲ್ತಾನ ಅಚ್ಚ ಕನ್ನಡದ ದೊರೆ ಎಂಬುದಕ್ಕೆ ಆಧಾರಗಳನ್ನು ಸಂಗ್ರಹಿಸಿದ ಕಿರು ಹೊತ್ತಿಗೆ `ಕೆಚ್ಚೆದೆಯ ಅಚ್ಚಕನ್ನಡಿಗ ಟೀಪು ಸುಲ್ತಾನ’. ದೇವನಹಳ್ಳಿಯಲ್ಲಿ ಜನಿಸಿ ಶ್ರೀರಂಗಪಟ್ಟಣದಲ್ಲಿ ಶಿಕ್ಷಣ ಪಡೆದ ಟೀಪು , ತನ್ನ ಹದಿನೇಳು ವರ್ಷಗಳ ಆಡಳಿತದಲ್ಲಿ ಕನ್ನಡ ನಾಡಿಗೆ ಸಲ್ಲಿಸಿದ ಸೇವೆಯನ್ನು ವಿವಿಧ ಮೂಲೆಯಿಂದ ಆಧರಿಸಿ ಸಂಗ್ರಹಿಸಿ ಸಂಕ್ಷಿಪ್ತವಾಗಿ ಲೇಖಕ ಲಕ್ಷ್ಮಣ ಕೊಡಸೆ ಅವರು ದಾಖಲಿಸಿದ್ದಾರೆ.
ಕತೆಗಾರ, ಪತ್ರಕರ್ತ ಲಕ್ಷ್ಮಣ ಕೊಡಸೆ ಅವರು 1953 ಏಪ್ರಿಲ್ 12ರಂದು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೊಡಸೆ ಗ್ರಾಮದಲ್ಲಿ ಜನಿಸಿದರು. ತಾಯಿ ಭರ್ಮಮ್ಮ, ತಂದೆ ಕರಿಯನಾಯ್ಕ. ಹುಟ್ಟೂರು ಹಾಗೂ ಹೊಸನಗರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರಜಾವಾಣಿಯಲ್ಲಿ ಉಪಸಂಪಾದಕರಾಗಿ, ಮುಖ್ಯವರದಿಗಾರರಾಗಿ ಸುದ್ದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. ‘ಅಪ್ಪನ ಪರಪಂಚ, ಕೊಡಚಾದ್ರಿ, ಸಹಪಥಿಕ, ಅವ್ವ, ಬಿ. ವೆಂಕಟಾಚಾರ್ಯ, ಕುವೆಂಪು ಮತ್ತು, ಕನ್ನಡ ವಿಮರ್ಶಾ ವಿವೇಕ, ಹಾಯಿದೋಣಿ’ ಅವರ ಪ್ರಮುಖ ಕೃತಿಗಳು. ...
READ MORE