ಕಾಂತಾವರ ಕನ್ನಡ ಸಂಘದ 'ನಾಡಿಗೆ ನಮಸ್ಕಾರ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ 242ನೇ ಪುಸ್ತಕ. ಮದ್ದಳೆಯ ಮೋಡಿಗಾರ ಕೆಮ್ಮಣ್ಣು ನಾರ್ಣಪ್ಪಯ್ಯನವರು (1896 -1976) ವೃತ್ತಿ-ಪ್ರವೃತ್ತಿ ಎರಡರಲ್ಲೂ ಮೆಚ್ಚುಗೆಗೆ ಪಾತ್ರವಾಗಿ ಜನಮಾನಸದಲ್ಲಿ ಹಸಿರಾಗಿ ಉಳಿದ ವಿರಳರಲ್ಲಿ ಒಬ್ಬರು. ವೃತ್ತಿಯಲ್ಲಿ ಶಾನುಭೋಗರಾಗಿ, ಪ್ರವೃತ್ತಿಯಲ್ಲಿ ನಾದಪೂರ್ಣ ಮದ್ದಳೆಗಾರರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ ಖ್ಯಾತಿ-ಪ್ರೀತಿಗೆ ಭಾಜನರಾದವರು. 1912ರಿಂದ ಯಕ್ಷಗಾನದ ಆಟ ಕೂಟಗಳಲ್ಲಿ ತೊಡಗಿಸಿಕೊಂಡು ಮದ್ದಳೆವಾದನದಲ್ಲಿ ಯಾರೂ ಅಳಿಸಲಾಗದ ಗುರುತನ್ನು ಮೂಡಿಸಿದರು. ಅವರ ಮದ್ದಳೆವಾದನದ ಸೊಗಸನ್ನು ಶಿವರಾಮ ಕಾರಂತರು ತಮ್ಮ 'ಯಕ್ಷಗಾನ ಬಯಲಾಟ' ಕೃತಿಯಲ್ಲಿಯೂ ಉಲ್ಲೇಖಿಸಿದ್ದಾರೆ. ಅವರ ಜೀವನ-ಸಾಧನೆಯನ್ನು ಈ ಕೃತಿಯು ಕಟ್ಟಿಕೊಡುತ್ತದೆ.
©2024 Book Brahma Private Limited.