ಕೇಸರಿ ಭಯೋತ್ಪಾದನೆ-ಲೇಖಕ ಸುರೇಶ ಭಟ್ ಭಾಕ್ರಬೈಲು ಬರೆದ ಲೇಖನಗಳ ಸಂಗ್ರಹ ಕೃತಿ ಇದು. ಆರ್.ಎಸ್.ಎಸ್ ಸಂಘಟನೆಯ ಒಳ-ಹೊರಗೊಂದು ಇರುವ ತಂತ್ರಗಳನ್ನು ಬಯಲು ಮಾಡುವ ಕೃತಿ. ತಮ್ಮದು ಸಾಂಸ್ಕೃತಿಕ ಸಂಘಟನೆ, ದೇಶಭಕ್ತರ ಕೂಟ ಎಂದೆಲ್ಲ ಹೇಳಿಕೊಳ್ಳುವ ಆರೆಸ್ಸೆಸ್ ಮತ್ತು ಅದರ ವಿವಿಧ ಅಂಗಗಳ ಹತ್ತಾರು ಭಯೋತ್ಪಾದಕ ಕೃತ್ಯಗಳನ್ನು ತೆರೆದಿಡುವ ಪುಸ್ತಕವಿದೆ.
ಮಂಗಳೂರಿನವರಾದ ಸುರೇಶ ಭಟ್ ಬಾಕ್ರಬೈಲ್ ಅವರು ಸುರತ್ಕಲ್ ನ ಕೆ.ಆರ್.ಇ.ಸಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದವರು. ಮುಂಬಯಿಯಲ್ಲಿ ವಾಣಿಜ್ಯ ನೌಕೆ, ನೌಕಾ ನಿರ್ಮಾಣ, ಡೀಸಲ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅವರು 2006ರಲ್ಲಿ ನಿವೃತ್ತರಾದರು. ನಿವೃತ್ತರಾದ ನಂತರ ಅವರು ಬರಹ ಹಾಗೂ ಮಾನವ ಹಕ್ಕು, ಕೋಮು ಸೌಹಾರ್ದ ಚಳವಳಿಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಕಾಲೀನ ವಿಷಯಗಳ ಬಗ್ಗೆ ಬರೆಯುವದರ ಜೊತೆಗೆ ಕೋಮುವಾದದ ವಿರುದ್ಧ ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ. ಕೇಸರಿ ಭಯೋತ್ಪಾದನೆ, ಮಂಕು ಬೂ(ಮೋ)ದಿ ಪುಸ್ತಕಗಳನ್ನು ಬರೆದಿದ್ದಾರೆ. ಹಾಗೆಯೇ ಕರ್ಕರೆಯನ್ನು ಕೊಂದವರು ಯಾರು?, ಜೈಲಿನ ...
READ MORE