ಸ್ವಾತಂತ್ಯ್ರೋತ್ತರ ಭಾರತದ ರಾಜಕೀಯ ವ್ಯವಸ್ಥೆಯನ್ನು ವಿಡಂಬನಾತ್ಮಕವಾಗಿ ನೋಡುವ ಕಾದಂಬರಿ ’ಖಾದಿಸೀರೆ’. ದುಷ್ಟರ ಜೊತೆಗೆ ಭ್ರಷ್ಟರು ಸೇರಿದರೆ ಏನಾಗುತ್ತದೆ ಎಂಬುದನ್ನು ಹಲವು ಪಾತ್ರಗಳ ಮೂಲಕ ತೋರಿಸಲಾಗಿದೆ. ದೇಶಭಕ್ತಿಯ ಮುಖವಾಡ ಹಾಕಿಕೊಂಡ ಗೋಮುಖ ವ್ಯಾಘ್ರರು ನಡೆಸುವ ಅನ್ಯಾಯ- ಅತ್ಯಾಚಾರ ವಿಶಿಷ್ಟ ರೀತಿಯಲ್ಲಿ ಮಂಡನೆಯಾಗಿದೆ.
'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...
READ MORE