ಭಾರತದ ಗಡಿನಾಡ ಗಾಂಧಿ ಎಂದೇ ಪ್ರಖ್ಯಾತರಾದ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಕುರಿತು ಪರಿಚಯಾತ್ಮಕ ಕೃತಿ ಇದು. ಪ್ರೌಢಶಾಲಾ ಶಿಕ್ಷಣದಲ್ಲಿ ರಾಷ್ಟ್ರೀಯ ನಾಯಕರನ್ನು ಪರಿಚಯಿಸುವ ನಲೆಯಲ್ಲಿ ಪ್ರಕಟವಾಗಿದೆ. ಡಾ. ನಾ. ಸೋಮೇಶ್ವರ ಸಂಪಾದಕರು. ರವಿಶಂಕರ್ ಎ.ಕೆ -ಲೇಖಕರು. ಗಡಿನಾಡ ಗಾಂಧಿಯ ಬಾಲ್ಯ, ಶಿಕ್ಷಣ, ಚಳವಳಿ, ದೇಶಪ್ರೇಮ ಕುರಿತು ಸರಳವಾದ ಶೈಲಿಯಲ್ಲಿ ಚರ್ಚಿಸಲಾಗಿದೆ.
ರವಿಶಂಕರ ಎ.ಕೆ. ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಳಿಲುಘಟ್ಟ ಗ್ರಾಮದವರು. ಅರವಿಂದ ಆಶ್ರಮದಿಂದ ಪ್ರಭಾವಿತರು. ಕನ್ನಡ ಸಾಹಿತ್ಯದಲ್ಲಿ ಶಿಕ್ಷಣ ಪದವಿ, ಸ್ನಾತಕೋತ್ತರ ಪದವಿ ಹಾಗೂ ‘ಬೇಂದ್ರೆ ಸಾಹಿತ್ಯ : ವಿಮರ್ಶೆಯ ಸ್ವರೂಪ ಮತ್ತು ತಾತ್ವಿಕತೆ’ ವಿಷಯದ ಮೇಲೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಜೈನ್ ವಿಶ್ವವಿದ್ಯಾಲಯ, ಆಳ್ವಾಸ್ ಶಿಕ್ಷಣ ಸಂಸ್ಥೆ, ಕೃಪಾನಿಧಿ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ ಸದ್ಯ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಅಂಕುರ-ಎಂಬುದು ಇವರ ಕಾವ್ಯನಾಮ. ಕೃತಿಗಳು: ಖಾನ್ ಅಬ್ದುಲ್ ಗಫಾರ್ ಖಾನ್(ಜೀವನ ಚರಿತ್ರೆ 2013), ಎತ್ತಿಕೊಂಡವರ ಕೂಸು (ಕವನ ಸಂಕಲನ -2017), ...
READ MOREಖಾನ್ ಅಬ್ದುಲ್ ಗಫಾರ್ ಖಾನ್ ಗಡಿನಾಡ ಗಾಂಧಿ ಎಂದೇ ಪ್ರಸಿದ್ಧರು. ಬ್ರಿಟಿಷರ ದಬ್ಬಾಳಿಕೆಗೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಕುಖ್ಯಾತವಾಗಿರುವ ಹಾಗೆ, ಕಿಸ್ಸಾ ಖ್ವಾನಿ ಬಜಾರ್ ಹತ್ಯಾಕಾಂಡವೂ ಕುಖ್ಯಾತವಾಗಿದೆ.