ಖ್ಯಾತ ಭೂವಿಜ್ಞಾನಿ ಬಿ.ಪಿ. ರಾಧಾಕೃಷ್ಣ

Author : ಟಿ. ಆರ್. ಅನಂತರಾಮು

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ಕ್ರೆಸೆಂಟ್ ರೋಡ್, ಬೆಂಗಳೂರು-560 001
Phone: 080 -22161913

Synopsys

ಡಾ. ಬಿ.ಪಿ ರಾಧಾಕೃಷ್ಣ, ಕರ್ನಾಟಕದ ಹೆಸರಾಂತ ಭೂವಿಜ್ಞಾನಿ. ಅಂತಾರಾಷ್ಟ್ರೀಯ ಖ್ಯಾತಿ ಇವರಿಗಿದೆ. ಕರ್ನಾಟಕದಲ್ಲಿ ಖನಿಜಾಧಾರಿತ ಕೈಗಾರಿಕೆಗಳು ಪ್ರವರ್ಧಮಾನಕ್ಕೆ ಬರಲು ಇವರ ಕಾಣ ಕೆ ದೊಡ್ಡದು. ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನಿರ್ದೇಶಕರಾಗಿ, ಆ ಸಂಸ್ಥೆ ಉನ್ನತ ಮಟ್ಟಕ್ಕೆ ಏರಲು ದುಡಿದವರು. ವಿಶೇಷವಾಗಿ, ಪ್ರತ್ಯೇಕವಾದ ಅಂತರ್ಜಲ ವಿಭಾಗವನ್ನು ತೆರೆದು ರೈತರಿಗೆ ನೆರವಾದವರು. ಕರ್ನಾಟಕದ ಚಿನ್ನದ ಗಣಿ ಗಳ ಬಗ್ಗೆ ವ್ಯಾಪಕ ಅಧ್ಯಯನ ಮಾಡಿ ಅವುಗಳನ್ನು ಹೇಗೆ ಲಾಭದಾಯಕವಾಗಿ ಮಾಡಬಹುದು ಎಂದು ತೋರಿಸಿಕೊಟ್ಟವರು.

ಪಶ್ಚಿಮಘಟ್ಟಗಳ ಬಗ್ಗೆ ವಿಶೇಷ ಆಸಕ್ತಿ ತಳೆದು ಅಲ್ಲಿ, ಭೂಸ್ವರೂಪವನ್ನು ಅಧ್ಯಯನ ಮಾಡಿದವರು. ಭಾರತೀಯ ಭೂವೈಜ್ಞಾನಿಕ ಸಂಘದ ಸ್ಥಾಪಕ ಸದಸ್ಯರಾಗಿ, ಆ ಪತ್ರಿಕೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಿದವರು. ಅವರು ಕನ್ನಡದಲ್ಲಿ ಬರೆದ ಎರಡು ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಸಂದಿದೆ. ಡಾ. ಬಿ.ಪಿ. ರಾಧಾಕೃಷ್ಣ ಅವರ ಕೊಡುಗೆಯನ್ನು ಸ್ಮರಿಸಿ ಕೋಲಾರದ ಚಿನ್ನದ ಗಣಿಯಲ್ಲಿ ದೊರೆತ ಒಂದು ಖನಿಜಕ್ಕೆ `ರಾಧಾಕೃಷ್ಣೈಟ್’ ಎಂದು ಹೆಸರು ನೀಡಲಾಗಿದೆ. ಭಾರತ ಸರ್ಕಾರ ಅವರಿಗೆ `ಪದ್ಮಶ್ರೀ’ ಪ್ರಶಸ್ತಿ ಕೊಟ್ಟು ಗೌರವಿಸಿದೆ. ಈ ಕೃತಿಯಲ್ಲಿ ರಾಧಾಕೃಷ್ಣ ಅವರ ಕುಟುಂಬದ ಹಿನ್ನೆಲೆ, ಹಂತ ಹಂತವಾಗಿ ಅವರು ಭೂವಿಜ್ಞಾನಿಯಾಗಿ ಬೆಳೆದ ಪರಿ, ಅವರು ನಾಡಿಗೆ ಕೊಟ್ಟ ಕೊಡುಗೆಗಳನ್ನು ಸರಳವಾಗಿ ಆದರೆ ಪರಿಣಾಮಕಾರಿಯಾಗಿ ನಿರೂಪಿಸಲಾಗಿದೆ.

 

About the Author

ಟಿ. ಆರ್. ಅನಂತರಾಮು
(03 August 1949)

ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ.  ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ.  ...

READ MORE

Related Books