ಕಿತ್ತೂರಿನ ವೀರರಾಣಿ ಚೆನ್ನಮ್ಮ-ಈ ಐತಿಹಾಸಿಕ ಕಾದಂಬರಿಯನ್ನು ಡಾ. ಬಸವರಾಜ ನಾಯ್ಕರ ಬರೆದಿದ್ದಾರೆ. ಉತ್ತರ ಭಾರತದಲ್ಲಿ ಬ್ರಿಟಿಷ್ ವಸಾಹತುಶಾಹಿ ವಿರೋಧಿಸಿ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಅವರ ಹೋರಾಟದ 33 ವರ್ಷಗಳಷ್ಟು ಹಿಂದೆಯೇ, 1828 ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಬ್ರಿಟಿಷ್ ವಸಾಹತು ಶಾಹಿ ಸರ್ಕಾರ ಮಧ್ಯೆ ನಡೆದ ಘರ್ಷಣೆಯ ಚಿತ್ರಣವೇ ಈ ಕಾದಂಬರಿಯ ವಸ್ತುವಾಗಿದೆ. ಐತಿಹಾಸಿಕ ವಸ್ತುವನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿರುವ ಕಥಾ ನಿರೂಪಣೆಯ ಆಕರ್ಷಣೆ ಹಾಗೂ ಪರಿಣಾಮಕಾರಿ ಶೈಲಿಯಿಂದ ಈ ಕಾದಂಬರಿ ಓದುಗರ ಗಮನ ಸೆಳೆಯುತ್ತದೆ.
ಡಾ. ಬಸವರಾಜ ನಾಯ್ಕರ್ ಅವರು ಮೂಲತಃ ಗದಗ (ಜನನ: 01-08-1949) ಜಿಲ್ಲೆಯ ನರಗುಂದದವರು. ತಂದೆ ಶಿವಶಂಕರಪ್ಪ ನಾಯ್ಕರ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ, ನರಗುಂದದಲ್ಲಿ ಪ್ರೌಢಶಿಕ್ಷಣ ಮತ್ತೇ ಧಾರವಾಡದಲ್ಲಿ ಪಿಯುಸಿಯಿಂದ ಕರ್ನಾಟಕ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-ಇಂಗ್ಲಿಷ್) ಹಾಗೂ ಕ್ಯಾಲಿಫೋರ್ನಿಯಾದಿಂದ ಡಿ.ಲಿಟ್ ಪದವೀಧರರು. ಗುಲಬರ್ಗಾ ವಿ.ವಿಯಲ್ಲಿ ಸಂಶೋಧನಾ ಸಹಾಯಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಉಪನ್ಯಾಸಕರಾಗಿ ರೀಡರ್ ಆಗಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೀಡರ್, ಪ್ರೊಫೆಸರ್, ಪ್ರೊಫೆಸರ್ ಎಮಿರಿಟಿಸ್ ಆಗಿ (2011-12) ನಿವೃತ್ತಿಯಾದರು. ಅನುವಾದಿತ ಕೃತಿಗಳು: ಪಡುವಣ ನಾಡಿನ ಪ್ರೇಮವೀರ- 1975, ಜೋಗೀಭಾವಿ-1976, ಕೊಳ್ಳದ ನೆರಳು-1978, ಹುಚ್ಚುಹೊಳೆ-1980, ನಿಗೂಢ ಸೌಧ (11 ಫ್ರೆಂಚ್ ಕಥೆಗಳ ಅನುವಾದ)-1982, ಗೋವರ್ಧನರಾಮ-1984, ಭಾರತೀಯ ಇಂಗ್ಲೀಷ್ ಸಾಹಿತ್ಯ ಚರಿತ್ರೆ-2006, ಕೆಂಪು ...
READ MORE