ಮರಾಠಿಯ ಖ್ಯಾತ ಸಾಹಿತಿ ಡಾ. ವಿ.ಎಸ್. ಖಾಂಡೇಕರ್ ಅವರ ಕಾದಂಬರಿಯನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿ-ಕ್ರೌಂಚವಧೆ. ದೇಶಾಭಿಮಾನವನ್ನು ಬಡಿದೆಬ್ಬಿಸುವ ಹಾಗೂ ಸ್ಫೂರ್ತಿದಾಯಕ ಈ ಕಾದಂಬರಿಯು ಭಾರತೀಯ ಎಲ್ಲಭಾಷೆಗಳಿಗೂ ಅನುವಾದಗೊಂಡಿದೆ. ರಾಮಾಯಣದ ಹುಟ್ಟಿಗೆ ಕ್ರೌಂಚಪಕ್ಷಿಗಳ ವಧೆ ಕಾರಣವಾಯಿತು ಎಂದಾದರೆ ಅಲ್ಲಿಯ ಪರಿಕಲ್ಪನೆಯನ್ನು ಸಾಮಾಜಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕಟ್ಟಿಕೊಟ್ಟ ಕಾದಂಬರಿ ಇದು.
ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...
READ MORE