ಲೇಖಕಿ, ಕಾದಂಬರಿಗಾರ್ತಿ ಆಶಾ ರಘು ಅವರ ಸಾಮಾಜಿಕ ನಾಟಕ ಕ್ಷಮಾದಾನ. ಶ್ರೀಪತಿ ಮಂಜನಬೈಲು ಅವರು ಕೃತಿಗೆ ಮುನ್ನುಡಿ ಬರೆದಿದ್ದಾರೆ.
ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯರಲ್ಲಿ ಒಬ್ಬರು. ಇವರು ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18 ನೇ ತಾರೀಖಿನಂದು ಬೆಂಗಳೂರಿನಲ್ಲಿ ಹುಟ್ಟಿದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 'ಆವರ್ತ', 'ಗತ', 'ಮಾಯೆ', 'ಚಿತ್ತರಂಗ' ಮೊದಲಾದ ಕಾದಂಬರಿಗಳನ್ನೂ, 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು' ಮೊದಲಾದ ಕಥಾಸಂಕಲನಗಳನ್ನೂ, 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ...
READ MORE