ಕಂನಾಡಿಗಾ ನಾರಾಯಣ ಅವರ ಎರಡನೆ ಕಥಾಸಂಕಲನ 'ಕ್ಷುದ್ರ ನಕ್ಷತ್ರದ ಕಪ್ಪು ರಂಧ್ರ'. ಹಂದಿಗೋಡು ಎಂಬ ಕಾಯಿಲೆಗೆ ಸಾಮಾಜಿಕ ಆಯಾಮ ಕೊಡುವ ಪ್ರಯತ್ನವನ್ನು ಇಲ್ಲಿ ಕಾಣಬಹುದು. ಇಲ್ಲಿ ಬರುವ 'ಮುಜರ' ಸಾಂಕೇತಿಕವಾಗಿ ನೀಡುವ ಅರ್ಥ ಪರಂಪರೆ ದೊಡ್ಡದು. ಮಾನವನ ಅಂತರಂಗದಲ್ಲಿ ಹುದುಗಿದ ನೀಚತನ; ಲೋಭ; ಮಾತ್ಸರ್ಯ; ಸಣ್ಣತನ, ದೌರ್ಜನ್ಯ ಮುಂತಾದ ಅವಗುಣಗಳನ್ನು ವ್ಯಾಖ್ಯಾನಿಸುತ್ತದೆ.
ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...
READ MORE