ಶೋಷಿತರ- ದೀನ ದಲಿತರ ಆಶಾಕಿರಣದಂತೆ ಕಾರ್ಯನಿರ್ವಹಿಸಿದವರು ಕುದ್ಮುಲ್ ರಂಗರಾವ್ ಅವರು. ದಲಿತರ ಉದ್ಧಾರದ ಕನಸು ಕಂಡ ರಂಗರಾವ್ ಅದನ್ನು ಆಗು ಮಾಡುವುದಕ್ಕಾಗಿ ಶ್ರಮಿಸಿದವರು. ರಂಗರಾವ್ ಜೀವನ- ಸಾಧನೆಗಳನ್ನು ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಅವರು ಕಟ್ಟಿಕೊಟ್ಟಿದ್ದಾರೆ. ಕಾಂತಾವರ ಕನ್ನಡ ಸಂಘ ಪ್ರಕಟಿಸುತ್ತಿರುವ ’ನಾಡಿಗೆ ನಮಸ್ಕಾರ’ ಸರಣಿಯ 124ನೇ ಕೃತಿ.
ಕತೆಗಾರ, ಪತ್ರಕರ್ತ ಲಕ್ಷ್ಮಣ ಕೊಡಸೆ ಅವರು 1953 ಏಪ್ರಿಲ್ 12ರಂದು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೊಡಸೆ ಗ್ರಾಮದಲ್ಲಿ ಜನಿಸಿದರು. ತಾಯಿ ಭರ್ಮಮ್ಮ, ತಂದೆ ಕರಿಯನಾಯ್ಕ. ಹುಟ್ಟೂರು ಹಾಗೂ ಹೊಸನಗರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರಜಾವಾಣಿಯಲ್ಲಿ ಉಪಸಂಪಾದಕರಾಗಿ, ಮುಖ್ಯವರದಿಗಾರರಾಗಿ ಸುದ್ದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. ‘ಅಪ್ಪನ ಪರಪಂಚ, ಕೊಡಚಾದ್ರಿ, ಸಹಪಥಿಕ, ಅವ್ವ, ಬಿ. ವೆಂಕಟಾಚಾರ್ಯ, ಕುವೆಂಪು ಮತ್ತು, ಕನ್ನಡ ವಿಮರ್ಶಾ ವಿವೇಕ, ಹಾಯಿದೋಣಿ’ ಅವರ ಪ್ರಮುಖ ಕೃತಿಗಳು. ...
READ MORE