ಲೇಖಕ ಫಕೀರ್ ಮುಹಮ್ಮದ್ ಕಟ್ಪಾಡಿ ಅವರು ಕುಂದಾಪುರ ಪರಿಸರದಲ್ಲಿಯ ಕಥೆಗಳನ್ನು ಬರೆದ ಸಂಕಲನವಿದು-ಕುಂದಾಪ್ರ. ಕುಂದಾಪುರದ ಭಾಷೆ ಕನ್ನಡ ನೆಲದ್ದಾದರೂ ಅದು ಕನ್ನಡದಿಂದ ಬೇರೆಯಾಗಿ ತನ್ನತನವನ್ನು ಕಾಯ್ದುಕೊಂಡು ಬಂದಿದೆ. ಕೇವಲ ಭಾಷೆ ಮಾತ್ರವಲ್ಲ ಆಚರಣೆಯ ದೃಷ್ಟಿಯಿಂದಲೂ ವಿಶಿಷ್ಟತೆಯನ್ನು ಮೆರೆದಿದೆ. ಇಂತಹ ಪರಿಸರದ ಪರಿಮಳ ಹೊತ್ತ ಕಥೆಗಳು ತಮ್ಮ ಸಾಂಸ್ಕತಿಕ ಮೆರಗಿನಿಂದ, ಗಟ್ಟಿತನದಿಂದ ಓದುಗರ ಗಮನ ಸೆಳೆಯುತ್ತವೆ.
ಕತೆಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಅವರು ಮೂಲತಃ ಉಡುಪಿ ಜಿಲ್ಲೆಯ ಬಾರಕೂರಿನವರು. 1949 ಜೂನ್ 25ರಂದು ಜನಿಸಿದರು. ಬಿ.ಕಾಂ. ಪದವೀಧರರಾಗಿದ್ದ ಅವರು ಬ್ಯಾಂಕ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ’ಗೋರಿ ಕಟ್ಟಿಕೊಂಡವರು’, ’ನೋಂಬು’, ’ದಜ್ಜಾಲ’, ’ಅತ್ತರ್ ಹಾಜಿಕ್ ಮತ್ತು ಇತರ ಕತೆಗಳು’, ’ಪಚ್ಚ ಕುದುರೆ’ ಕತಾಸಂಕಲನಗಳು. ನೀಳ್ಗತೆಗಳ ಸಂಕಲನ ’ಕಡವು ಮನೆ’ ಹಾಗೂ ’ಸರಕುಗಳು’ ಮತ್ತು ’ಕಚ್ಚಾದ’ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ’ಬೇರೂತಿನಿಂದ ಜರುಸಲೇಮಿಗೆ (2010) ಮತ್ತು ಮಂಟೋ ಬರೆದ ದೇಶ ವಿಭಜನೆಯ ಕತೆಗಳು’ ಅನುವಾದ ಕೃತಿಗಳು. ’ಕಯ್ಯೂರಿನ ರೈತವೀರರು’, ’ರಾಷ್ಟ್ರೀಯತೆ ಮತ್ತು ಮುಸ್ಲಿಮರು’, ’ಸೂಫಿ ಸಂತರು’ ...
READ MORE