ಕುಟುಂಬ ವ್ಯವಸ್ಥೆ, ಮಾರ್ಕ್ಸ್‌ವಾದ– ಸ್ತ್ರೀವಾದ

Author : ಬಿ. ಸುಜ್ಞಾನಮೂರ್ತಿ

Pages 102

₹ 80.00




Published by: ಲಡಾಯಿ ಪ್ರಕಾಶನ
Address: ಲಡಾಯಿ ಪ್ರಕಾಶನ, 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ತೆಲುಗು ಸಾಹಿತ್ಯ ಕ್ಷೇತ್ರದಲ್ಲಿ ಸೃಜನಶೀಲ ಲೇಖಕಿಯಾಗಿ, ಸ್ತ್ರೀವಾದಿ ಚಿಂತಕಿಯಾಗಿ, ಮಹಿಳಾ ಚಳವಳಿಯ ಸಕ್ರಿಯ ಹೋರಾಟಗಾರ್ತಿಯಾಗಿ ಓಲ್ಗಾ ಅವರನ್ನು ಗುರುತಿಸಲಾಗುತ್ತದೆ. ಓಲ್ಗಾ ಅವರು ತಮ್ಮ ಈ ಕೃತಿಯಲ್ಲಿ  ಮಾರ್ಕ್ಸ್‌ವಾದ ಮತ್ತು ಸ್ತ್ರೀವಾದಗಳ ನಡುವಿನ ಸಂಬಂಧವನ್ನು ಪರಿಶೀಲಿಸುವಂಥ ವಿಚಾರಗಳನ್ನು ವಿವರಿಸಿದ್ದಾರೆ. ಈ ಕೃತಿಯನ್ನು ಬಿ. ಸುಜ್ಞಾನಮೂರ್ತಿ ಅವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಅವರು ತಮ್ಮ ಲೇಖನದಲ್ಲಿ ಮಹಿಳೆ, ಕುಟುಂಬ ಸಾಮಾಜಿಕ ಸಂಬಂಧಗಳ ಕುರಿತು ವಿವರಗಳನ್ನು ಒದಗಿಸಿದ್ದಾರೆ.

About the Author

ಬಿ. ಸುಜ್ಞಾನಮೂರ್ತಿ
(06 July 1960)

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...

READ MORE

Related Books