ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಕಾಯಕ ವರ್ಷಆಚರಣೆಯ ವೇಳೆ ಕನ್ನಡ ಕಾಯಕ ಮಾಲೆ-1 ರಲ್ಲಿ ಪ್ರಕಟಕಂಡ ಕುವೆಂಪು ಕನ್ನಡ ಪ್ರಜ್ಞೆ ಕೃತಿಯನ್ನು ಲೇಖಕ ಗುರುಪಾದ ಮರಿಗುದ್ದಿ ಅವರು ಸಂಪಾದಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಟಿ.ಎಸ್. ನಾಗಾಭರಣ ಅವರು ಹಾಗೂ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ಅವರ ಮಾತುಗಳು ಕೃತಿಯ ಬೆನ್ನುಡಿಯಲ್ಲಿದೆ..
ಪ್ರಸ್ತುತ ಕೃತಿಯಲ್ಲಿ ಎರಡು ಭಾಗಗಳಲ್ಲಿ ಕುವೆಂಪು ಅವರ ಕನ್ನಡ-ಕನ್ನಡಿಗ-ಕರ್ನಾಟಕ ವಿಚಾರ, ಚಿಂತನೆ ಭಾವನೆಗಳು ಅಳವಟ್ಟಿದೆ. ಮೊದಲ ಭಾಗದಲ್ಲಿ ಹತ್ತು ಲೇಖನಗಳಿವೆ.
ಡಾ. ಗುರುಪಾದ ಮರಿಗುದ್ದಿ ಅವರು ಸೃಜನಶೀಲ ಹಾಗೂ ಸೃಜನೇತರ ಕ್ಷೇತ್ರಗಳೆರಡರಲ್ಲಿಯೂ ಕೃತಿ ರಚಿಸಿರುವ 'ಸವ್ಯಸಾಚಿ’. ಕಾವ್ಯಲಹರಿಯಿಂದ ಆರಂಭವಾದ ಸಾಹಿತ್ಯ ಕೃಷಿಯು ಸಂಶೋಧನೆ, ವಿಮರ್ಶೆ ಹಾಗೂ ಕುವೆಂಪು ಸಾಹಿತ್ಯದ ಬಗ್ಗೆ ಆಳವಾದ ಅಧ್ಯಯನ, ಲೋಕಾನುಭವ ಸಾಹಿತ್ಯಗಳಲ್ಲಿ ಹರಡಿದೆ. ಅವರು ಕುವೆಂಪು ಸಾಹಿತ್ಯ ಕುರಿತಂತೆ ಬರೆದ ನಿರಂತರ ನಿಷ್ಠಾವಂತ ಕೃಷಿಕರು. ಕುವೆಂಪು ಸಾಹಿತ್ಯದ ಕುರಿತು ಉತ್ತರ ಕರ್ನಾಟಕದಲ್ಲಿ ಕುವೆಂಪು ಸಾಹಿತ್ಯದ ಪರಿಚಯ ಕೈಗೊಂಡಿದ್ದಾರೆ. ಗುರುಪಾದ ಮರಿಗುದ್ದಿ ಅವರು ಸ್ವಂತ ಪ್ರತಿಭೆ ಹಾಗೂ ಸತತ ಅಭ್ಯಾಸದಿಂದ ಸಾಹಿತ್ಯದ ಹಲವು ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರೀತಿ ಸಂಪಾದಿಸಿರುವ ಅವರು ವಾಗ್ಮಿಯಾಗಿಯೂ ಜನಪ್ರಿಯ. ಸರಳತೆ ಸಜ್ಜನಿಕೆಗೆ ಹೆಸರಾದ ಮರಿಗುದ್ದಿ ...
READ MORE