ಜ್ಞಾನಪೀಠ ಪ್ರಶಸ್ತಿ ಮೊದಲ ಬಾರಿಗೆ ಕನ್ನಡಕ್ಕೆ ಬರುವಂತೆ ಮಾಡಿದ ಕುವೆಂಪು.ಅವರ ಎಲ್ಲಾ ಕೃತಿಗಳಲ್ಲಿ ಕಂಡು ಬರುವ ಸೂಕ್ತಿಗಳನ್ನು ಸಂಪಾದಿಸಿ ಈ ಒಂದು ಕೃತಿಯನ್ನಾಗಿ ಹರಿಹರ ಪ್ರಿಯರು ಓದುಗರ ಮುಂದೆ ಇಟ್ಟಿದ್ದಾರೆ. ಕುವೆಂಪು ಅವರ ವಿಚಾರದ ಹರವು, ವಿಷಯ ವೈವಿಧ್ಯ ಹಾಗೂ ಆಲೋಚನಾ ಕ್ರಮ , ದೃಷ್ಟಿಕೋನ ಎಲ್ಲವೂ ಈ ಕೃತಿಯಲ್ಲಿ ಕಂಡು ಬರುತ್ತದೆ.
ಆಂಧ್ರಮೂಲದ ಸಾತವಲ್ಲಿ ವೇಂಕಟವಿಶ್ವನಾಥಭಟ್ಟ ಅವರು ಹರಿಹರಪ್ರಿಯ ಎಂದೇ ಪರಿಚಿತರು. ಮೈಸೂರಿನಲ್ಲಿ ಜನಿಸಿದ (ಜ. 1952) ಅವರು ಬೆಳೆದದ್ದು ಮಂಡ್ಯದಲ್ಲಿ. ಪ್ರೌಢಶಾಲೆಯವರೆಗೆ ಓದಿ ನಂತರ ’ಕನ್ನಡ ಜಾಣ’ದಲ್ಲಿ ಉನ್ನತಮಟ್ಟದ ಯಶಸ್ಸು ಸಾಧಿಸಿದ ಅವರು ರಾಷ್ಟ್ರಕವಿ ಕುವೆಂಪು ಅವರನ್ನು ಕನ್ನಡದ ಗುರು ಎಂದು ಕೊಂಡ ಹಾಗೆ ತೆಲುಗಿನ ಮಹಾಕವಿ ಶ್ರೀಶ್ರೀ ಅವರು ಹೋರಾಟಕ್ಕೆ ಗುರು. ಕಾವ್ಯ, ಕಾದಂಬರಿ, ಕತೆ, ನಾಟಕ, ವಿಚಾರ ವಿಮರ್ಶೆ, ಸಂಶೋಧನೆ, ವ್ಯಕ್ತಿಚಿತ್ರ, ತೌಲನಿಕ ಅಧ್ಯಯನ, ಗ್ರಂಥಸಂಪಾದನೆ, ಅಂಕಣ ಬರಹ ಮುಂತಾದ ಪ್ರಕಾರಗಳಲ್ಲಿ ಕೃತಿ ರಚನೆ ಮಾಡಿದ್ದಾರೆ. ನಾನ್ ಅಕಾಡೆಮಿಕ್ ಚಳವಳಿಗಾರ, ಸಾಂಸ್ಕೃತಿಕ ರಾಯಭಾರಿ ಎಂದು ಹೆಸರು. ...
READ MORE