ಕುವೆಂಪು ಸಂಚಯ - ಪ್ರಾತಿನಿಧಿಕ ರಚನೆಗಳು

Author : ಕುವೆಂಪು (ಕೆ.ವಿ. ಪುಟ್ಟಪ್ಪ)

Pages 932

₹ 450.00




Year of Publication: 2009
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 080 - 23183311, 23183312

Synopsys

ಕೆ.ವಿ. ಪುಟ್ಟಪ್ಪರು ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ, ವಿಶ್ವಮಾನ್ಯತೆಗೆ ಅರ್ಹತೆಯನ್ನು ಪಡೆದ ಕವಿ. ಅವರ 25,000 ಸಾಲಿನ ಮಹಾಕಾವ್ಯ ಶ್ರೀ ರಾಮಾಯಣದರ್ಶನಂ, ಎರಡು ಸಾವಿರ ಪುಟದಷ್ಟು ಇರುವ ಇತರ ಕಾವ್ಯ, ಎರಡು ಸಾವಿರ ಪುಟಗಳಷ್ಟು ಗದ್ಯ, ಇವುಗಳನ್ನೆಲ್ಲಾ ಒಟ್ಟುಗೂಡಿಸಿ ಬಹುತೇಕ ಎಲ್ಲಾ ವಿಭಾಗಗಳಿಂದಲೂ ಪ್ರಾತಿನಿಧಿಕವಾದವುಗಳನ್ನು ಆರಿಸಿ ಇಲ್ಲಿನ 850 ಕ್ಕೂ ಹೆಚ್ಚಿನ ಪುಟಗಳಲ್ಲಿ ಈ ಪುಸ್ತಕದಲ್ಲಿ ನೀಡಲಾಗಿದೆ.

About the Author

ಕುವೆಂಪು (ಕೆ.ವಿ. ಪುಟ್ಟಪ್ಪ)
(29 December 1904 - 11 November 1994)

ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯವರಾದ ಪುಟ್ಟಪ್ಪ ಜನಿಸಿದ್ದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆಯಲ್ಲಿ 1904ರ ಡಿಸೆಂಬರ್ 29ರಂದು. ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ಎಂ.ಎ. ಪದವಿ (1929) ಪಡೆದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕ (1929) ಆಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ...

READ MORE

Related Books